ಭಾನುವಾರ, ಏಪ್ರಿಲ್ 11, 2021
28 °C

ಲಾಲ್‌ಬಾಗ್‌ನಲ್ಲಿ ವಾಹನ ನಿಲುಗಡೆ: ಸಮಿತಿ ರಚಿಸಿ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಲ್‌ಬಾಗ್ ಉದ್ಯಾನವನದಲ್ಲಿ ವಾಹನ ನಿಲುಗಡೆ ನಿಲ್ದಾಣ ಬೇಕೇ ಅಥವಾ ಬೇಡವೇ ಎಂಬುದನ್ನು ಅಧ್ಯಯನ ನಡೆಸಲು ಬುದ್ಧಿಜೀವಿಗಳನ್ನು ಒಳಗೊಂಡ ಮೂವರ ಸಮಿತಿ ರಚಿಸಲಾಗುವುದು. ಅದು ಕೊಡುವ ವರದಿಯನ್ನಾಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತೋಟಗಾರಿಕೆ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದರು.ಲಾಲ್‌ಬಾಗ್ ಉದ್ಯಾನವನದಲ್ಲಿ ವಾಹನ ನಿಲುಗಡೆ ನಿಲ್ದಾಣ ನಿರ್ಮಾಣಕ್ಕೆ ಕೆಲವರಿಂದ ವಿರೋಧ ಬಂದ ಕಾರಣ ಸದ್ಯಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.ವಾಹನ ನಿಲುಗಡೆ ನಿಲ್ದಾಣಕ್ಕಾಗಿ ಇದುವರೆಗೂ 20 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ ಎಂದೂ ಅವರು ವಿವರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.