ಶುಕ್ರವಾರ, ಮಾರ್ಚ್ 5, 2021
23 °C

ಲಾಸ್‌ ಏಂಜಲೀಸ್‌ ವಿಮಾನ ನಿಲ್ದಾಣದಲ್ಲಿ ಶಾರುಖ್‌ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಸ್‌ ಏಂಜಲೀಸ್‌ ವಿಮಾನ ನಿಲ್ದಾಣದಲ್ಲಿ ಶಾರುಖ್‌ ವಶಕ್ಕೆ

ನ್ಯೂಯಾರ್ಕ್ (ಪಿಟಿಐ): ಅಮೆರಿಕದ ಲಾಸ್‌ ಏಂಜಲೀಸ್‌ ವಿಮಾನ ನಿಲ್ದಾಣದಲ್ಲಿ ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರನ್ನು ವಲಸೆ ವಿಭಾಗದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಹೀಗೆ ತಮ್ಮನ್ನು ಪದೇ ಪದೇ ವಶಕ್ಕೆ ಪಡೆಯುವ ಬಗ್ಗೆ ಶಾರುಖ್‌ ಖಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಭದ್ರತಾ ಕ್ರಮಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಮತ್ತು ಅದನ್ನು ನಾನು ಗೌರವಿಸುತ್ತೇನೆ. ಆದರೆ, ಅಮೆರಿಕದ ವಲಸೆ ವಿಭಾಗದ ಅಧಿಕಾರಿಗಳು ಪ್ರತಿ ಬಾರಿ ಹೀಗೆ ವಶಕ್ಕೆ ಪಡೆಯುವುದು ಹಿಂಸೆಯಾಗುತ್ತದೆ’ ಎಂದು ಶಾರುಖ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ.

ಶಾರುಖ್‌ ಖಾನ್‌ ವಿಮಾನ ನಿಲ್ದಾಣದಲ್ಲಿ ಈ ರೀತಿಯ ಸಮಸ್ಯೆಗೆ ಸಿಲುಕಿದ್ದಕ್ಕೆ ಅಮೆರಿಕ ಸರ್ಕಾರದ ದಕ್ಷಿಣ ಮತ್ತು ಕೇಂದ್ರ ಏಷ್ಯಾ ವಿಭಾಗದ ಸಹಾಯಕ ಕಾರ್ಯದರ್ಶಿ ನಿಶಾ ದೇಸಾಯಿ ಬಿಸ್ವಾಲ್‌ ಟ್ವಿಟರ್‌ ಮೂಲಕ ಕ್ಷಮೆ ಯಾಚಿಸಿದ್ದಾರೆ.

ಶಾರುಖ್‌ ಖಾನ್‌ ಅವರು ಅಮೆರಿಕದಲ್ಲಿ ಈ ರೀತಿಯ ಸಮಸ್ಯೆ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ 7 ವರ್ಷಗಳ ಅಮೆರಿಕದ ಪ್ರವಾಸದಲ್ಲಿ ಶಾರುಖ್‌ 3 ಬಾರಿ ‘ಇಂತಹ’ ಪರಿಸ್ಥಿತಿಯನ್ನು ಎದುರಿಸಿದ್ದಾರೆ.

2012ರಲ್ಲಿ ನ್ಯೂಯಾರ್ಕ್‌ ಬಳಿಯ  ವೈಟ್‌ಪ್ಲೇನ್ಸ್‌ ವಿಮಾನ ನಿಲ್ದಾಣದಲ್ಲಿ ಶಾರುಖ್‌ ಅವರನ್ನು ವಲಸೆ ವಿಭಾಗದ ಅಧಿಕಾರಿಗಳು ಎರಡು ಗಂಟೆ ಕಾಲ ವಶಕ್ಕೆ ಪಡೆದಿದ್ದರು.

2009ರಲ್ಲಿ ನ್ಯೂಜೆರ್ಸಿ ವಿಮಾನ ನಿಲ್ದಾಣದಲ್ಲೂ ವಲಸೆ ವಿಭಾಗದ ಅಧಿಕಾರಿಗಳು ಶಾರುಖ್‌ ಖಾನ್‌ ಅವರನ್ನು ವಶಕ್ಕೆ ಪಡೆದಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.