ಬುಧವಾರ, ಜೂನ್ 23, 2021
30 °C

ಲಿಂಗಾಯತರಿಗೆ ಟಿಕೆಟ್: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಸ್ಪರ್ಧಿಸಲು ತಮ್ಮ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಪಕ್ಷದ ಲಿಂಗಾಯತ ಮುಖಂಡರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಅಲ್ಲಂ ವೀರಭದ್ರಪ್ಪ, ವಿ.ಎಸ್.ಕೌಜಲಗಿ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮುಖಂಡರಾದ ಡಾ.ಎ.ಬಿ.ಮಾಲಕ ರಡ್ಡಿ, ಎಂ.ಬಿ.ಪಾಟೀಲ, ಸಿ.ಎಸ್.ನಾಡಗೌಡ, ಬಿ.ಆರ್.ಪಾಟೀಲ, ರಾಣಿ ಸತೀಶ್ ಈ ಸಂಬಂಧ ಸೋನಿಯಾ ಅವರಿಗೆ ಪತ್ರ ಬರೆದಿದ್ದಾರೆ.ಕಾಂಗ್ರೆಸ್‌ನ ಒಂದು ಸ್ಥಾನಕ್ಕೆ ರಾಜ್ಯಸಭೆಯ ಉಪಸಭಾಪತಿ ಕೆ.ರೆಹಮಾನ್ ಖಾನ್ ಅವರಿಗೆ ಟಿಕೆಟ್ ನೀಡಿದ್ದು, ಕೊನೆಪಕ್ಷ ಎರಡನೇ ಅಭ್ಯರ್ಥಿಯನ್ನಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನು ಕಣಕ್ಕೆ ಇಳಿಸಬೇಕು ಎಂದು ವಿಧಾನ ಪರಿಷತ್ತಿನ ಮಾಜಿ ಉಪಸಭಾಪತಿ ಬಿ.ಆರ್.ಪಾಟೀಲ ಆಗ್ರಹಿಸಿದ್ದಾರೆ.ಎಂ.ವಿ.ರಾಜಶೇಖರನ್ ನಂತರ ರಾಜ್ಯಸಭೆಯಲ್ಲಿ ಲಿಂಗಾಯತರಿಗೆ ಪ್ರಾತಿನಿಧ್ಯ ದೊರೆತಿಲ್ಲ. ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಶೇ 18.5ರಷ್ಟಿದೆ. ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲೂ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಆದರೆ ಸಂಸತ್ತಿನಲ್ಲಿ ಲಿಂಗಾಯತರಿಗೆ ಪ್ರಾತಿನಿಧ್ಯವೇ ಇಲ್ಲ. `ಶಿವರಾಜ್ ಪಾಟೀಲ ನಂತರ ನಮ್ಮ ಸಮುದಾಯದಿಂದ ಯಾರೊಬ್ಬರೂ ಲೋಕಸಭೆಗೆ ಆರಿಸಿ ಬಂದಿಲ್ಲ. ಆದ್ದರಿಂದ ರಾಜ್ಯಸಭಾ ಚುನಾವಣೆಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು~ ಎಂದು ಪತ್ರದಲ್ಲಿ ಅವರು ಕೋರಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.