ಸೋಮವಾರ, ಏಪ್ರಿಲ್ 19, 2021
27 °C

ಲಿಂಬಾವಳಿ ವಿರುದ್ಧ ತನಿಖೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಹುಮಹಡಿ ಕಟ್ಟಡದ ವಿಸ್ತೀರ್ಣ ಹೆಚ್ಚಿಸುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ರಸ್ತೆಯನ್ನು ಕಾನೂನು ಉಲ್ಲಂಘಿಸಿ ವಿಸ್ತರಿಸಿದ ಆರೋಪ ಎದುರಿಸುತ್ತಿರುವ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ, ಐಎಎಸ್ ಅಧಿಕಾರಿ ಭರತ್‌ಲಾಲ್ ಮೀನಾ, ಡಿಎಲ್‌ಎಫ್ ಹೋಮ್ಸ ಸಂಸ್ಥೆ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಹೆಚ್ಚಿನ ಜಾಗ ಕಲ್ಪಿಸುವ ಉದ್ದೇಶದಿಂದ ಲಿಂಬಾವಳಿ ಅವರು ಬಿಬಿಎಂಪಿಗೆ ಸೂಚನೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಬೇಗೂರಿನಲ್ಲಿ ಈ ಅಪಾರ್ಟ್‌ಮೆಂಟ್ ನಿರ್ಮಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಈ ಆದೇಶ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.