ಭಾನುವಾರ, ಮೇ 9, 2021
33 °C

ಲೇಖಕಿಯರಿಗೆ ಪೂರಕ ವಾತಾವರಣ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಮಹಿಳೆಯರಿಗೆ ಭಾವನಾತ್ಮಕ ಸ್ವಾತಂತ್ರ್ಯ ದೊರೆಯುವುದರ ಜೊತೆಗೆ ನಾಡು, ನುಡಿ ಹಾಗೂ ಪರಿಸರಕ್ಕೆ ಬದ್ಧವಾಗಿ ಬರೆಯುವ ವಾತಾವರಣ  ನಿರ್ಮಾಣ ಮಾಡುವ ಅಗತ್ಯವಿದೆ ಎಂದು ಲೇಖಕಿ, ಕಾರ್ಕಳದ ಜ್ಯೋತಿ ಗುರುಪ್ರಸಾದ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಮಹಿಳಾ ಬರಹಗಾರರ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಮಡಿಕೇರಿ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕಿ ಸುಜಾತ ತಳವಾರ್ ಮಾತನಾಡಿ, ಮಹಿಳೆಯರ ನೋವುಗಳನ್ನು ಸಮರ್ಥವಾಗಿ ಬಿಂಬಿಸಲು ಮಹಿಳಾ ಸಾಹಿತ್ಯದ ಅವಶ್ಯಕತೆ ಇದೆ ಎಂದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷೆ ಕಸ್ತೂರಿ ಗೋವಿಂದಮ್ಮಯ್ಯ  ಹಾಗೂ ಸಾಹಿತಿ ಮಹಾಬಲೇಶ್ವರ್ ಭಟ್ ಮಾತನಾಡಿದರು.ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಆಯ್ಕೆಗೊಂಡಿರುವ ಕಸ್ತೂರಿ ಗೋವಿಂದಮ್ಮಯ್ಯ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.ಸೋಮವಾರಪೇಟೆ ತಾಲ್ಲೂಕು ಮಹಿಳಾ ಬರಹಗಾರರ ಒಕ್ಕೂಟದ ಕಾರ್ಯದರ್ಶಿ ಜಲಜಾ ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಸದಸ್ಯೆ ಎಂ.ಜಿ.ಅನ್ನಮ್ಮ ಸ್ವಾಗತಿಸಿ, ಶ್ವೇತಾ ರವೀಂದ್ರ ಕಾರ್ಯಕ್ರಮ ನಿರೂಪಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.