ಮಂಗಳವಾರ, ಏಪ್ರಿಲ್ 20, 2021
32 °C

ಲೇಖಕಿಯರ ಸಂಘಕ್ಕೆ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಇದೇ 16ರಂದು ಚುನಾವಣೆ ನಡೆಯಲಿದೆ. ವೈದ್ಯ ಸಾಹಿತಿ ಡಾ.ವಸುಂಧರಾ ಭೂಪತಿ ಮತ್ತು ಲೇಖಕಿ ಬಿ.ನಾರಾಯಣಮ್ಮ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ.

16ರಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜಪೇಟೆಯ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ.  800ಕ್ಕೂ ಹೆಚ್ಚು ಲೇಖಕಿಯರು ಸಂಘದ ಸದಸ್ಯರಾಗಿದ್ದು ಒಂದು ವರ್ಷಕ್ಕೂ ಅಧಿಕ ಅವಧಿಯ ಸದಸ್ಯರು ಮತದಾನ ಮಾಡಬಹುದು. ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ನೂತನ ಅಧ್ಯಕ್ಷರಿಗೆ ಇದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.