ಮಂಗಳವಾರ, ಜೂನ್ 22, 2021
23 °C

ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಲೋಕಸಭೆ ಚುನಾವ ಣೆಯ 63 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೈಂಗಿಕ ಅಲ್ಪ ಸಂಖ್ಯಾತರನ್ನು ಪುರುಷರು ಮತ್ತು ಮಹಿಳೆಯರಿಂದ ಪ್ರತ್ಯೇಕಿಸಿ, ಪ್ರತ್ಯೇಕ ವರ್ಗ ಎಂದು ಪರಿಗಣಿಸಲಾಗುವುದು. ದೇಶದಲ್ಲಿಯೇ ಈ ವರ್ಗದ ಹೆಚ್ಚು ಮತದಾರರು ಕರ್ನಾಟಕದಲ್ಲಿದ್ದಾರೆ.ಫೆ. 2014ರ ವರೆಗಿನ ಮತದಾರರ ಪಟ್ಟಿಯ ಪ್ರಕಾರ ಈ ವರ್ಗಕ್ಕೆ ಸೇರಿದ ಮತದಾರರ ಸಂಖ್ಯೆ 28,341. ಇದು ದೇಶದ 81.45 ಕೋಟಿ ಮತದಾರರ ಶೇ 0.0035ರಷ್ಟು. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ‘ಇತರೆ’ ಲಿಂಗ ವರ್ಗಕ್ಕೆ ಸೇರಿದ ಮತದಾರರಿದ್ದಾರೆ.ಅನಿವಾಸಿ ಮತದಾರರು: 1950ರ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಿರುವ ಸಂಸತ್‌, ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ರಿಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಅವ ಕಾಶ ನೀಡಿದೆ. ಇದರಿಂದ ಭಾರತದಲ್ಲಿ ಈಗ 11,844 ಸಾಗರೋತ್ತರ ಮತದಾರರೂ ಇದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.