ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಇಂಡಿಯಾ ಅಲಯನ್ಸ್ ಸಂಸ್ಥೆಯು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಪೆಹಚಾನ್ ಯೋಜನೆಯನ್ನು ಹಮ್ಮಿಕೊಂಡಿದೆ.

ಈ ಯೋಜನೆಯನ್ನು ಕರ್ನಾಟಕ ಮತ್ತು ಕೇರಳದಲ್ಲಿ ಸಮರ್ಪಕವಾಗಿ ಜಾರಿಗೊಳಿಸಲು `ಸಂಗಮ~ ಸಂಘಟನೆಗೆ ಜವಾಬ್ದಾರಿ ನೀಡಿದೆ. ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಸ್ಥೆಯ ಅಕ್ಕೈ ಪದ್ಮಸಾಲಿ, `ಇಂಡಿಯಾ ಅಲಯನ್ಸ್ ಸಂಸ್ಥೆಯು ಒಟ್ಟು 17 ರಾಜ್ಯಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಸಂಘ ಸಂಸ್ಥೆಗಳೊಂದಿಗೆ ಕೈ ಜೋಡಿಸಿದೆ.

ಕಾರ್ಯಕ್ರಮಕ್ಕೆ ಅಗತ್ಯವಿರುವ ಹಣವನ್ನು ಸಂಸ್ಥೆಯೇ ಒದಗಿಸುವುದರಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು~ ಎಂದು ತಿಳಿಸಿದರು.ಈ ಸಂಸ್ಥೆಯ ಧನಸಹಾಯದೊಂದಿಗೆ ಕೇರಳ ಮತ್ತು ಕರ್ನಾಟಕದಲ್ಲಿ ನೆಲೆ ನಿಂತಿರುವ ಲೈಂಗಿಕ ಅಲ್ಪಸಂಖ್ಯಾತರಿಗೆ ಸ್ವ -ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ ಬಗ್ಗೆ ಕಾರ್ಯಾಗಾರ ನಡೆಸಲಾಗುವುದು.

ಲೈಂಗಿಕ ಅಲ್ಪಸಂಖ್ಯಾತರ ಆರೋಗ್ಯ, ಹಕ್ಕುಗಳ ಬಗ್ಗೆ ಜಾಗೃತಿ ಮತ್ತು ಹಣ ಗಳಿಸುವಿಕೆ ಮತ್ತು ಉಳಿತಾಯದ ಬಗ್ಗೆ ಸಹ ಸಂಪೂರ್ಣ ಮಾಹಿತಿ ನೀಡಲಾಗುವುದು~ ಎಂದು ತಿಳಿಸಿದರು. `ಸರ್ಕಾರಿ ನೌಕರರು, ಪೊಲೀಸ್ ಹಾಗೂ ಸಾಮಾಜಿಕ ಬದ್ದತೆಯುಳ್ಳ ವರ್ಗದೊಂದಿಗೆ ಸಮಾಲೋಚನೆ ನಡೆಸಿ, ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಅರಿವು ಮೂಡಿಸಲಾಗುವುದು~ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.