ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ವಿತರಿಸಿ

ಮಂಗಳವಾರ, ಮೇ 21, 2019
23 °C

ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ವಿತರಿಸಿ

Published:
Updated:

ನವದೆಹಲಿ (ಪಿಟಿಐ): ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ನೀಡುವಂತೆ ಸುಪ್ರೀಂಕೋರ್ಟ್ ಗುರುವಾರ ಎಲ್ಲಾ ಕೇಂದ್ರ ಮತ್ತು ರಾಜ್ಯಗಳಿಗೆ ಸೂಚನೆ ನೀಡಿದೆ.ಲೈಂಗಿಕ ಕಾರ್ಯಕರ್ತರ ಪುನರ್‌ವಸತಿಗಾಗಿ ಸಲಹೆ ನೀಡುವಂತೆ ರಚಿಸಿದ್ದ ಸಮಿತಿಯ ಮೂರನೇ ವರದಿಯನ್ನು ಅಂಗೀಕರಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಮತ್ತು ಜ್ಞಾನ್ ಸುಧಾ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ನಿರ್ದೇಶನ ನೀಡಿದೆ.ಹಿರಿಯ ವಕೀಲರಾದ ಪ್ರದೀಪ್ ಘೋಷ್ ಜಯಂತ್ ಭೂಷಣ್ ಮತ್ತು ಕೆಲವು ಎನ್‌ಜಿಒಗಳ ಪದಾಧಿಕಾರಿಗಳನ್ನು ಸಮಿತಿ ಒಳಗೊಂಡಿತ್ತು.`ಸಮಿತಿ ನೀಡಿರುವ ಸಲಹೆ ಉತ್ತಮವಾಗಿದೆ. ಪಡಿತರ ಚೀಟಿ, ಮತದಾರರ ಗುರುತು ಚೀಟಿ ಅಥವಾ ಬ್ಯಾಂಕ್‌ನಲ್ಲಿ ಖಾತೆ ತೆರೆಯುವಾಗ ಲೈಂಗಿಕ ಕಾರ್ಯಕರ್ತರು ಅನೇಕ ಸಂಕಷ್ಟ ಎದುರಿಸಬೇಕಾಗುತ್ತದೆ. ಅವರೂ ಭಾರತದ ಪ್ರಜೆಗಳಾದ್ದರಿಂದ ಮತ್ತು ಇತರರಂತೆ ಮೂಲಭೂತ ಹಕ್ಕುಗಳನ್ನು ಹೊಂದಿರುವುದರಿಂದ ಅವರು ಇಂತಹ ಕಷ್ಟಗಳನ್ನು ಎದುರಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು~ ಎಂದು ಪೀಠ ತಿಳಿಸಿದೆ.`ಸಮಿತಿ ತನ್ನ ಮೂರನೇ ಮಧ್ಯಂತರ ವರದಿಯಲ್ಲಿ ಮಾಡಿರುವ ಸಲಹೆಗಳನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಜಾರಿಗೊಳಿಸಬೇಕು~ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry