ಗುರುವಾರ , ಜನವರಿ 30, 2020
18 °C

ಲೈಂಗಿಕ ಕಿರುಕುಳ: ಪ್ರಾಧ್ಯಾಪಕ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಸಹಾಯಕ ಪ್ರಾಧ್ಯಾಪಕ ಹಾಗೂ ಮಾರ್ಗದರ್ಶಕ ಪ್ರೊ.ದಶರಥ ನಾಯಕ ಅವರನ್ನು ಮಹಾರಾಷ್ಟ್ರದ ಹಿಂಗೊಳ್ಳಿ ಜಿಲ್ಲೆಯ ತಾಂಡಾವೊಂದಲ್ಲಿ ಶನಿವಾರ ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.‘ಪ್ರೊ.ದಶರಥ ನಾಯಕ ಅವರನ್ನು ಮಹಾರಾಷ್ಟ್ರದ ಹಿಂಗೊಳ್ಳಿ ಜಿಲ್ಲೆಯ ತಾಂಡಾವೊಂದರಲ್ಲಿ ಬಂಧಿಸಿ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು. ತನಿಖೆ ಪ್ರಗತಿಯಲ್ಲಿ ಇರುವುದರಿಂದ ಈ ಬಗ್ಗೆ ಸಂಪೂರ್ಣ ವಿವರ ನೀಡಲು ಆಗದು’ ಎಂದು ಪŁಕರಣದ ವಿಚಾರಣೆ ನಡೆಸುತ್ತಿರುವ ಜಿಲ್ಲಾ ಪೊಲೀಸ್ ಸಹಾಯಕ ವರಿಷ್ಠಾಧಿಕಾರಿ (ಗ್ರಾಮಾಂತರ ಉಪ ವಿಭಾಗ) ಸಂತೋಷ ಬಾಬು ತಿಳಿಸಿದರು.

ಪ್ರತಿಕ್ರಿಯಿಸಿ (+)