ಮಂಗಳವಾರ, ಏಪ್ರಿಲ್ 20, 2021
26 °C

ಲೈಂಗಿಕ ದೌರ್ಜನ್ಯ: ಅಧಿಕಾರಿಯ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ತಮಿಳುನಾಡು ಬಾಕ್ಸಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎ.ಕೆ.ಕರುಣಾಕರನ್ ಅವರನ್ನು ಬಂಧಿಸಲಾಗಿದೆ. ಮಹಿಳಾ ಬಾಕ್ಸರೊಬ್ಬರ ದೂರಿನ ಮೇಲೆ ತಮಿಳುನಾಡು ಪೊಲೀಸರು ಮಂಗಳವಾರ ಈ ಕ್ರಮ ಕೈಗೊಂಡಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಉತ್ತಮ ಪ್ರದರ್ಶನ ತೋರಿದರೂ ಮುಂಬರುವ ಚಾಂಪಿಯನ್‌ಷಿಪ್‌ಗೆ ತಮ್ಮನ್ನು ಆಯ್ಕೆ ಮಾಡಿಲ್ಲ. ಅವರ ಲೈಂಗಿಕ ಅಭಿಲಾಷೆಗಳಿಗೆ ಸ್ಪಂದಿಸದ ಕಾರಣ ಹೀಗೆ ಮಾಡಿದ್ದಾರೆ ಎಂದು ಮಹಿಳಾ ಬಾಕ್ಸರ್ ದೂರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.