ಧಾರವಾಡ: `ರಾಯಾಪುರದ ನಿರಾಶ್ರಿತರ ವಸತಿ ಕೇಂದ್ರದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾ ರಿಗಳಿಗೆ ಸೂಚಿಸಲಾಗಿದೆ~ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಮಂಗಳವಾರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸಚಿವರು ಪತ್ರಕರ್ತರೊಂದಿಗೆ ಮಾತ ನಾಡಿದರು.

ನಿರಾಶ್ರಿತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಗರ್ಭಪಾತ ನಡೆದ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಪಾ ಸಣೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಧಿಕಾರಿಗಳ ವರದಿ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಕಂಡುಬಂದರೆ ಸಿಒಡಿಯಿಂದ ತನಿಖೆ ನಡೆಸಲಾಗುವುದು ಎಂದರು.

ನಿರಾಶ್ರಿತರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಯಾವುದೇ ಪುರಾವೆಗಳಿಲ್ಲ. ನಿರಾಶ್ರಿತ ಮಹಿಳೆಯರು ಸಹ ಇದನ್ನು ಅಲ್ಲಗಳೆದಿದ್ದಾರೆ. ಆದರೂ ಸಹ ಈ ಕುರಿತು ತನಿಖೆ ನಡೆಸಲಾ ಗುವುದು. ಮಾಧ್ಯಮ ಅಥವಾ ಸಾರ್ವ ಜನಿಕರ ಹತ್ತಿರ ಯಾವುದಾದರೂ ದಾಖಲೆಗಳು ಇದ್ದರೆ ಜಿಲ್ಲಾ ಆಡಳಿತಕ್ಕೆ ನೀಡಲಿ, ಆ ಬಗ್ಗೆಯೂ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಯಾವುದೇ ದೂರುಗಳು ದಾಖಲಾಗಿಲ್ಲ. ಆದರೆ ಇಂಥ ಪ್ರಕರಣಗಳು ಇಲಾಖೆಗೆ ಎಚ್ಚರಿಕೆ ಗಂಟೆಯಾಗಿದ್ದು, ತನಿಖೆ ನಡೆಸ ಲಾಗುವುದು ಎಂದ ಅವರು, ಕೇಂದ್ರ ದಲ್ಲಿ ಮಹಿಳಾ ಸಿಬ್ಬಂದಿ ಕೊರತೆ ಇದ್ದು, ನೇಮಕಾತಿಗಾಗಿ ತಕ್ಷಣ ಕ್ರಮ ಕೈಗೊಳ್ಳ ಲಾಗುವುದು ಎಂದು ತಿಳಿಸಿದರು.

ಮಡೆಸ್ನಾನ ನಿಷೇಧಿಸುವ ಕುರಿತ ಪ್ರಶ್ನೆಗೆ, `ಈ ಬಗ್ಗೆ ಕಾನೂನು ಸಚಿವರು ಈಗಾಗಲೇ ಹೇಳಿದ್ದಾರೆ. ಮಡೆಸ್ನಾನ ನಿಷೇಧಿಸಲಾಗುವುದು. ಮಠಾಧೀಶರ ಬಗ್ಗೆ ನಾನು ಯಾವುದೇ ಚರ್ಚೆ ಮಾಡು ವುದಿಲ್ಲ~ ಎಂದು ಹೇಳಿದರು.
ಇದಕ್ಕೂ ಮುನ್ನ ಕೇಂದ್ರದ ಸೌಕ ರ್ಯಗಳನ್ನು ಪರಿಶೀಲಿಸಿದ ಸಚಿವರು, ಕೇಂದ್ರದ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡರು.

ಶಾಸಕ ಚಂದ್ರಕಾಂತ ಬೆಲ್ಲದ, ವೀರ ಭದ್ರಪ್ಪ ಹಾಲಹರವಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಕಾಟವೆ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ನವೀನರಾಜ್ ಸಿಂಗ್, ಜಿಲ್ಲಾಧಿಕಾರಿ ದರ್ಪಣ ಜೈನ್, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಎಸ್.ಎ.ಮುಲ್ಲಾ, ಎಸಿಪಿ ಡಾ. ಸಂಜೀವ ಪಾಟೀಲ, ಕೇಂದ್ರದ ಅಧೀಕ್ಷಕ ದಿವಾಕರ ಎಸ್. ಈ ಸಂದರ್ಭದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.