ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯ
ನಾಸಿಕ್ (ಪಿಟಿಐ): ಭ್ರಷ್ಟಾಚಾರ ತಡೆಗೆ ಲೋಕಪಾಲ್ ಮಸೂದೆ ಜಾರಿಗೆ ತರಬೇಕೆಂದು ಒತ್ತಾಯಿಸಲು ಸಾಮಾಜಿಕ ಕಾರ್ಯಕರ್ತರಾದ ಅಣ್ಣಾ ಹಜಾರೆ ಅವರು ಏಪ್ರಿಲ್ 5 ರಂದು ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಕೂಡುವುದಾಗಿ ತಿಳಿಸಿದ್ದಾರೆ.
ಮಂಗಳವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಹಜಾರೆ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ಏಪ್ರಿಲ್ 12 ರಂದು ‘ಜೈಲ್ ಭರೋ’ ಮುಷ್ಕರದಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದರು.
ಭ್ರಷ್ಟಾಚಾರವನ್ನು ಮಹಾತ್ಮಾ ಗಾಂಧಿ ಅವರ ಚಿಂತನೆಯಂತೆ ಕಿತ್ತುಹಾಕಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮರಾಠಾ ದೊರೆ ಶಿವಾಜಿಯ ಹಾದಿ ಅನುಸರಿಸಬೇಕು ಎಂದರು. ತಮ್ಮ ಏಪ್ರಿಲ್ 5ರ ಉಪವಾಸ ‘ಸ್ವಾತಂತ್ರ್ಯದ ಎರಡನೇ ಸಮರ’ ಎಂದು ಬಣ್ಣಿಸಿದ ಅವರು ಯುವಕರು ಮುಂದೆ ಬರಬೇಕೆಂದು ಕರೆ ಇತ್ತರು.ಜನರು ಗ್ರಾಮ ಪಂಚಾಯಿತಿ, ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಬೇಕು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.