ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮಕ್ವಾನಾ ಭಾವನಾ ಬೆನ್ ಅವರನ್ನು ಭಾರತ ಚುನಾವಣಾ ಆಯೋಗ ಚುನಾವಣಾ ವೆಚ್ಚದ ವೀಕ್ಷಕರನ್ನಾಗಿ ನೇಮಿಸಿದೆ.

ಮಕ್ವಾನಾ ಅವರು ಬುಧವಾರ ಸಂಜೆ ಧಾರವಾಡಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸುವ ಲೆಕ್ಕಪತ್ರ ಅಧಿಕಾರಿಗಳ ತಂಡದ ಜೊತೆ ಚರ್ಚಿಸಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಲೆಕ್ಕ ಇಡುವ ಬಗ್ಗೆ ಮಾಹಿತಿ ನೀಡಿದರು.

ಗುರುವಾರ ಬೆಳಿಗ್ಗೆ ಪುನಃ ಚುನಾವಣಾ ವೆಚ್ಚ ನಿರ್ವಹಣೆ ಕುರಿತು ತಾಲ್ಲೂಕು ಮಟ್ಟದಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚ ನೋಡಿಕೊಳ್ಳುವ ಸಹಾಯಕ ವೆಚ್ಚದ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವೆಚ್ಚದ ವಿಭಾಗದ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರಮಾಣೀಕರಣ ಮತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳೊಂದಿಗೆ ಸಭೆ ನಡೆಸಿ, ಚುನಾವಣೆಯಲ್ಲಿ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ವೆಚ್ಚವನ್ನು ವಸ್ತುನಿಷ್ಠವಾಗಿ ಲೆಕ್ಕ ಇಡುವ ಬಗ್ಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವೆಚ್ಚದ ಅಧಿಕಾರಿ ಎಂ.ಎಸ್.ಜಯರಾಂ ಹಾಗೂ ವೀಕ್ಷಕರ ಲೈಸೆನ್ ಅಧಿಕಾರಿಯಾದ ಧನರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.