ಲೋಕಸಭೆಗೆ ಸ್ಪರ್ಧೆ ಇಲ್ಲ: ಎಚ್‌ಡಿಕೆ

7

ಲೋಕಸಭೆಗೆ ಸ್ಪರ್ಧೆ ಇಲ್ಲ: ಎಚ್‌ಡಿಕೆ

Published:
Updated:

ಕನಕಪುರ: ‘ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ರಾಜ್ಯ ರಾಜಕಾರಣ­ದಲ್ಲಿಯೇ ನಾನು ಉಳಿಯಲು ಅಪೇಕ್ಷೆ ಪಟ್ಟಿರುವುದರಿಂದ ಹಾಗೂ ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.ತಾಲ್ಲೂಕಿನ ಸುಂಡಘಟ್ಟ ಗ್ರಾಮದಲ್ಲಿ ಗ್ರಾಮ ಪ್ರವಾಸ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ 28 ಲೋಕಸಭಾ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳ­ಬೇಕಿರುವುದರಿಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.ಸಂಕ್ರಾಂತಿ ಹಬ್ಬದ ನಂತರ 28 ಕ್ಷೇತ್ರದ ಸ್ಪರ್ಧಿಗಳ ಹೆಸರನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry