ಬುಧವಾರ, ಫೆಬ್ರವರಿ 24, 2021
24 °C

ಲೋಕಸಭೆಯಲ್ಲಿ ಜಿಎಸ್‌ಟಿ ತಿದ್ದುಪಡಿ ಮಸೂದೆ ಮಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲೋಕಸಭೆಯಲ್ಲಿ ಜಿಎಸ್‌ಟಿ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ(ಪಿಟಿಐ): ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು, ಜಿಎಸ್‌ಟಿ ಜಾರಿಯಾಗುವುದರಿಂದ ತೆರಿಗೆ ವಂಚನೆ ಕಡಿಮೆಯಾಗಲಿದೆ ಎಂದು ತಿಳಿಸಿದರು.



ಜಿಎಸ್‌ಟಿ ಏಕರೂಪದ ತೆರಿಗೆ ವ್ಯವಸ್ಥೆಯಾಗಿದೆ. ಇದರಿಂದ ತೆರಿಗೆ ವಂಚನೆ ಕಡಿಮೆಯಾಗಿ ರಾಷ್ಟ್ರದಾದ್ಯಂತ ವ್ಯಾಪಾರ ವಹಿವಾಟು ಸುಗಮವಾಗಲಿದೆ ಎಂದು ಅರುಣ್‌ ಜೇಟ್ಲಿ ಹೇಳಿದರು.



2015ರ ಮೇನಲ್ಲಿ ಲೋಕಸಭೆಯಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರ ಪಡೆದಿದ್ದು, ಕಳೆದ ವಾರವಷ್ಟೇ ರಾಜ್ಯಸಭೆಯಲ್ಲಿ ಅಂಗೀಕಾರವಾದ ತಿದ್ದುಪಡಿ ಮಸೂದೆಯನ್ನು ಅರುಣ್‌ ಜೇಟ್ಲಿ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.