ಶುಕ್ರವಾರ, ಜೂನ್ 25, 2021
26 °C

ಲೋಕಸಭೆ ಚುನಾವಣಾ ವೇಳಾಪಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ದೇಶದಾದ್ಯಂತ ಒಂಬತ್ತು ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆಗೆ ಸೋಮವಾರ ಚಾಲನೆ ದೊರೆತಿದೆ.ಚುನಾವಣಾ ಆಯೋಗ ಮಾರ್ಚ್‌ 5ರಂದು ಘೋಷಿಸಿದ ಚುನಾವಣಾ ವೇಳಾಪಟ್ಟಿಯನ್ನು ಸರ್ಕಾರ ರಾಷ್ಟ್ರಪತಿಯವರಿಗೆ ಕಳುಹಿಸಿಕೊಟ್ಟಿದೆ.  ಅಧಿಸೂಚನೆ ಹೊರಡಿಸಲು ಒಪ್ಪಿಗೆ ನೀಡುವಂತೆ ಸೋಮವಾರ ಇಲ್ಲಿ ನಡೆದ ಕೇಂದ್ರ ಸಂಪುಟ ಸಭೆ ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.ಏಪ್ರಿಲ್‌ 7ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಮಾರ್ಚ್‌ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್‌ 14ರ ಅನ್ವಯ, ಚುನಾವಣಾ ಆಯೋಗವು ಚುನಾವಣೆಯ ದಿನಾಂಕಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಇದಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರ ಸಂಪುಟ ರಾಷ್ಟ್ರಪತಿಯವರನ್ನು ಕೋರುತ್ತದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.