ಮಡಿಕೇರಿ: ರಾಜ್ಯ ಮತ್ತು ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ಸನ್ನದ್ಧರಾಗಬೇಕೆಂದು ಕಾಂಗ್ರೆಸ್ನ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮಸೂದ್ ಫೌಝಿದರ್ ಹೇಳಿದರು.

ನಗರದ ಕೂರ್ಗ್ ಕಮ್ಯುನಿಟಿ ಹಾಲ್ನಲ್ಲಿ ಸೋಮವಾರ ನಡೆದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಜನರಿಗೆ ನಮ್ಮ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷೆ ವೀಣಾ ಅಚ್ಚಯ್ಯ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಸ್ಥಾನಗಳಲ್ಲಿ ಪಕ್ಷ ಪರಾಭವಗೊಂಡಿದೆ. ಇನ್ನಾದರೂ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಕಠಿಣ ಶ್ರಮ ವಹಿಸಬೇಕಿದೆ ಎಂದರು.

ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ವಿಧಾನಸಭಾ ಚುನವಾಣೆಯಲ್ಲಿ ಅಲ್ಪಸಂಖ್ಯಾತರನ್ನು ಸೂಕ್ತ ರೀತಿಯಲ್ಲಿ ಸಂಘಟಿಸದೇ ಇಲ್ಲದಿರುವುದು ಕೂಡ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದರು.

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯಾಕೂಬ್ ಮಾತನಾಡಿ, ಪಕ್ಷದ ಬಲವರ್ಧನೆಯನ್ನು ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಗಣೇಶ್, ಪಕ್ಷದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕುಮುದಾ ಧರ್ಮಪ್ಪ, ಜಿಲ್ಲಾ ಸಮಿತಿ ಸದಸ್ಯ ಹನೀಫ್, ಬೆಂಗಳೂರು ಮಹಾನಗರ ಪಾಲಿಕೆಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಾಷಾ ಸೇರಿದಂತೆ ಮತ್ತಿತರರು ಮಾತನಾಡಿದರು.

ಪಕ್ಷದ ಪ್ರಮುಖರಾದ ಎಂ.ಎ. ಉಸ್ಮಾನ್, ವಿ.ಪಿ. ಸುರೇಶ್, ಉಸ್ಮಾನ್ ಹಾಜಿ, ಅಹಮದ್, ರಾಜ್ಯ ಸಮಿತಿಯ ಕಾರ್ಯದರ್ಶಿ ಸಿ.ಪಿ. ರಶೀದ್, ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.