ಸೋಮವಾರ, ಜನವರಿ 27, 2020
22 °C

ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ: ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆಗೆ ಬಾಗಲಕೋಟೆ ಕ್ಷೇತದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಲ್ಲ  ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಾಲಿ ಸಂಸದರಾಗಿರುವ ಪಿ.ಸಿ.ಗದ್ದಿಗೌಡರೇ ಅಭ್ಯರ್ಥಿಯಾಗಲಿದ್ದಾರೆ ಎಂದರು.ಯಾರೇ ಅಭ್ಯರ್ಥಿಯಾಗಲಿ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು. ‘ಜಿಲ್ಲೆಯ ಕಾರ್ಯಕರ್ತರು ಲೋಕಸಭೆಯ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ವರಿಷ್ಠರ ನಿರ್ಣಯಕ್ಕೆ ಬದ್ಧವಾಗಿರುವೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)