ಬೆಂಗಳೂರು: `ರಾಜ್ಯದ ಅತ್ಯಂತ ಭ್ರಷ್ಟ ಪೊಲೀಸರು ಲೋಕಾಯುಕ್ತ ಸಂಸ್ಥೆಯಲ್ಲೇ ಇದ್ದಾರೆ~ ಎಂದು ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ್ ನೇರ ಆರೋಪ ಮಾಡಿದರು.

`ದಕ್ಷ~ ಸಂಸ್ಥೆ ನಗರದಲ್ಲಿ ಶನಿವಾರ ಏರ್ಪಡಿಸಿದ್ದ, `ಪ್ರಸ್ತುತ ದಿನಗಳಲ್ಲಿನ ರಾಜಕೀಯ, ಕಾನೂನು, ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ವ್ಯವಸ್ಥೆಯ ಮೇಲೆ ಲೋಕಾಯುಕ್ತ ವರದಿ ಪರಿಣಾಮ~ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, `ಈ ಹಿಂದೆ ಲೋಕಾಯುಕ್ತ ಸಂಸ್ಥೆಯಲ್ಲಿ ಕೆಲಸ ಮಾಡಿರುವ, ಇದೀಗ ಹೆಚ್ಚಿನ ಅಧ್ಯಯನಕ್ಕೆ ವಿದೇಶಕ್ಕೆ ತೆರಳಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಸಂಸ್ಥೆಯಲ್ಲಿರುವ ಭ್ರಷ್ಟ ಪೊಲೀಸ್ ಅಧಿಕಾರಿಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ~ ಎಂದರು.

`ಈ ಪೊಲೀಸರು ವಿವಿಧ ಜಿಲ್ಲೆಗಳಲ್ಲಿರುವ ಅಧಿಕಾರಿಗಳಿಗೆ, ತಮ್ಮ ಮಾತನ್ನು ಕೇಳದಿದ್ದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸುತ್ತಿದ್ದಾರೆ~ ಎಂದು ಹೇಳಿದರು.

`ಲೋಕಾಯುಕ್ತ ಸಂಸ್ಥೆ ನೀಡಿರುವ ವರದಿಗಳ ಆಧಾರದ ಮೇಲೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಲೋಕಾಯುಕ್ತರಿಗೆ ನೀಡಬೇಕು~ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಜಮೀನು ರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ವಿ.ಬಾಲಸುಬ್ರಮಣಿಯನ್ ಮಾತನಾಡಿ, `ರಾಜ್ಯದಲ್ಲಿ ಒಟ್ಟು 12 ಲಕ್ಷ ಎಕರೆ ಸರ್ಕಾರಿ ಜಮೀನನ್ನು ಭೂಗಳ್ಳರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರ ಒಟ್ಟು ಮಾರುಕಟ್ಟೆ ಮೌಲ್ಯ 2ಜಿ ತರಂಗಾಂತರ ಮತ್ತು ಗಣಿ ಹಗರಣದ ಮೊತ್ತಕ್ಕಿಂತಲೂ ಅಧಿಕ ಅಂದರೆ 1ಲಕ್ಷ 95 ಸಾವಿರ ಕೋಟಿ ರೂಪಾಯಿಗಳಾಗುತ್ತವೆ~ ಎಂದು ನುಡಿದರು.
ಮಾಜಿ ಸಚಿವ ಎಂ.ಸಿ.ನಾಣಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.