ಬುಧವಾರ, ಜೂನ್ 23, 2021
28 °C

ಲೋಕಾಯುಕ್ತರ ನೇಮಕಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಲವಾರು ತಿಂಗಳುಗಳಿಂದ ಖಾಲಿ ಇರುವ ರಾಜ್ಯ ಲೋಕಾಯುಕ್ತ ಹುದ್ದೆಗೆ ಅರ್ಹ ವ್ಯಕ್ತಿಯನ್ನು ನೇಮಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸದಸ್ಯರು ಇತ್ತೀಚೆಗೆ ರಾಜ್ಯಪಾಲರನ್ನು ಕಂಡು ಮನವಿ ಸಲ್ಲಿಸಿದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರನ್ನು ಭೇಟಿ ಮಾಡಿ ಶೀಘ್ರ ಖಾಲಿ ಹುದ್ದೆಯನ್ನು ತುಂಬುವಂತೆ  ಮನವಿ ಮಾಡಿದರು. ಈ ಸಂದರ್ಭದಲ್ಲಿ ದೊರೆಸ್ವಾಮಿ ಅವರು ನಿವೃತ್ತ ನ್ಯಾಯಾಧೀಶರಾದ ಮೈಸೂರಿನ ಶ್ರೀಕೃಷ್ಣ ಅವರ ಹೆಸರನ್ನು ಲೋಕಾಯುಕ್ತ ಸ್ಥಾನದ ನೇಮಕಕ್ಕಾಗಿ ಸೂಚಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಭೂ ಒತ್ತವರಿ ಕಾರ್ಯಪಡೆಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರ ವರದಿಯನ್ನು ಜಾರಿಗೆ ತರಬೇಕು ಎಂದು ವೇದಿಕೆಯ ಸದಸ್ಯರು ಮನವಿ ಮಾಡಿದರು.

ವೇದಿಕೆಯ ಅಧ್ಯಕ್ಷ ಕೆ.ಪ್ರಭಾಕರರೆಡ್ಡಿ, ಕರ್ನಾಟಕ ಕೈಗಾರಿಕಾ ಕನ್ನಡ ಸಂಘಗಳ ಒಕ್ಕೂಟದ ಕಾರ್ಯಾಧ್ಯಕ್ಷ ಸಿದ್ದಯ್ಯ, ಕನ್ನಡ ವೇದಿಕೆಯ ಯುವ ಘಟಕದ ಅಧ್ಯಕ್ಷ ಎಂ.ಲಕ್ಷ್ಮಣ ಮನವಿ ಸಲ್ಲಿಸುವ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.