ಬೆಂಗಳೂರು: ಪ್ರಕರಣವೊಂದರ ಆರೋಪಪಟ್ಟಿ ಸಲ್ಲಿಸಲು ವಕೀಲರೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಂಕರ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಠಾಣೆಯ ವ್ಯಾಪ್ತಿಯ ವಸಂತಕುಮಾರ್ ಎಂಬ ವಕೀಲರು ವ್ಯಕ್ತಿಯೊಬ್ಬರಿಗೆ ತಮ್ಮ ಭೂಮಿ ಮಾರಿದ್ದರು. ಅವರಿಂದ ಭೂಮಿ ಖರೀದಿಸಿದ ವ್ಯಕ್ತಿ 72 ಲಕ್ಷ ರೂಪಾಯಿ ನೀಡದೇ ವಂಚಿಸಿದ್ದರು. ಈ ಬಗ್ಗೆ ವಕೀಲರು ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಸುದೀರ್ಘ ಕಾಲ ಕಳೆದರೂ ಪ್ರಕರಣದ ಆರೋಪಪಟ್ಟಿ ಸಲ್ಲಿಸಿರಲಿಲ್ಲ. ಈ ಸಂಬಂಧ ತನಿಖಾಧಿಕಾರಿಯಾಗಿದ್ದ ಶಂಕರ್ ಅವರನ್ನು ಭೇಟಿಮಾಡಿದ ವಸಂತಕುಮಾರ್, ಶೀಘ್ರದಲ್ಲಿ ಆರೋಪಪಟ್ಟಿ ಸಲ್ಲಿಸುವಂತೆ ಮನವಿ ಮಾಡಿದ್ದರು. ಆಗ ಆರೋಪಿ ಅಧಿಕಾರಿ ರೂ 15 ಸಾವಿರ ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ವಕೀಲರು ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

‘ಸೋಮವಾರ ಠಾಣೆಯಲ್ಲೇ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ನಮ್ಮ ಪೊಲೀಸರು ಆರೋಪಿ ಸಬ್ ಇನ್ಸ್ಪೆಕ್ಟರ್ನನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ಮಧುಕರ ಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.