ಮಂಗಳವಾರ, ನವೆಂಬರ್ 12, 2019
27 °C

ಲೋಕಾಯುಕ್ತ ತನಿಖೆಯ ತಡೆ ತೆರವು

Published:
Updated:

ಬೆಂಗಳೂರು: ಬೆನ್ನಿಗಾನಹಳ್ಳಿಯಲ್ಲಿ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಅಕ್ರಮವಾಗಿ ಕೈಬಿಟ್ಟ ಪ್ರಕರಣದಲ್ಲಿ ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್ ವಿರುದ್ಧ ನಡೆಯುತ್ತಿರುವ ಲೋಕಾಯುಕ್ತ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ, ಈ ಆದೇಶ ನೀಡಿದರು. ಆದರೆ, ವಿಚಾರಣೆ ಸಂದರ್ಭದಲ್ಲಿ ಖುದ್ದು ಹಾಜರಾತಿಯಿಂದ ಶಿವಕುಮಾರ್ ಅವರಿಗೆ ವಿನಾಯಿತಿ ನೀಡಲಾಗಿದೆ.

ಪ್ರತಿಕ್ರಿಯಿಸಿ (+)