ಶನಿವಾರ, ಮೇ 15, 2021
24 °C

ಲೋಕಾಯುಕ್ತ ತನಿಖೆ: ಬಾಲಕೃಷ್ಣೇಗೌಡ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರನ್ನು ಲೋಕಾಯುಕ್ತ ತನಿಖೆಗೆ ವಹಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಕ್ರಮವನ್ನು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರ ಪುತ್ರ ಎಚ್. ಡಿ.ಬಾಲಕೃಷ್ಣೇಗೌಡ ಸ್ವಾಗತಿಸಿದ್ದಾರೆ.`ಲೋಕಾಯುಕ್ತ ಪೊಲೀಸರ ಮುಂದೆ ಸ್ವಯಂ ಪ್ರೇರಣೆಯಿಂದ ಹಾಜರಾಗಿ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿವರಗಳನ್ನು ನೀಡುತ್ತೇನೆ. ನನ್ನ ಮತ್ತು ನಮ್ಮ ಕುಟುಂಬದ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಇತಿಶ್ರೀ ಹಾಡಲು ಒದೊಂದು ಒಳ್ಳೆಯ ಅವಕಾಶ~ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.`1984ರಲ್ಲಿ ಉಪ ವಿಭಾಗಾಧಿಕಾರಿಯಾಗಿ ಸರ್ಕಾರಿ ಸೇವೆಗೆ ಸೇರ್ಪಡೆಯಾದ ನಾನು 21 ವರ್ಷಗಳ ಕಾಲ ಯಾವುದೇ ಕಳಂಕವಿಲ್ಲದೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ 2005ರಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದೇನೆ. ನಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರಲು ರಾಜಕೀಯ ದುರುದ್ದೇಶದಿಂದ ಭ್ರಷ್ಟಾಾರದ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ~ ಎಂದು ಹೇಳಿದ್ದಾರೆ.`ಕಳೆದ 25 ವರ್ಷಗಳಿಂದ ಆದಾಯ ತೆರಿಗೆಯನ್ನು ಪಾವತಿಸಿದ್ದೇನೆ. ಕಾನೂನುಬಾಹಿರ ಕ್ರಮಗಳಿಂದ ಯಾವುದೇ ರೀತಿಯ ಆಸ್ತಿಯನ್ನು ಗಳಿಸಿಲ್ಲ~ ಎಂದು ಅವರು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.