ಬೆಂಗಳೂರು: `ನೂತನ ಮುಖ್ಯಮಂತ್ರಿಯು ಒಂದು ತಿಂಗಳಲ್ಲಿ ಲೋಕಾಯುಕ್ತರನ್ನು ನೇಮಕ ಮಾಡಬೇಕು. ಇಲ್ಲವಾದರೆ, ರಾಜ್ಯಾದ್ಯಾಂತ ಬಿಜೆಪಿ ಹಟಾವೋ ಹೋರಾಟವನ್ನು ನಡೆಸಬೇಕಾಗುತ್ತದೆ~ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು.

ಕರ್ನಾಟಕ ಜಾಗೃತಿ ಜನಾಂದೋಲನವು ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಸರ್ಕಾರ 12 ತಿಂಗಳಾದರೂ ಲೋಕಾಯುಕ್ತರನ್ನು ನೇಮಿಸುವಲ್ಲಿ ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ಲೋಕಾಯುಕ್ತ ನೇಮಕಕ್ಕೆ ಒತ್ತಾಯಿಸಿ ಧರಣಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಆದರೆ, ಸರ್ಕಾರ ಇದ್ಯಾವುದನ್ನು ಪರಿಗಣಿಸದೆ ನಿರ್ಲಕ್ಷ್ಯಸುತ್ತಿದೆ~ ಎಂದರು.

`ಈ ಒಂದು ತಿಂಗಳಿನಲ್ಲಿ ಲೋಕಾಯುಕ್ತದ ಜನರಲ್ಲಿ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗುವುದು. ಸಾರ್ವಜನಿಕ ಸಭೆ, ಚರ್ಚೆಗಳನ್ನು ನಡೆಸಲಾಗುವುದು. ಇದಕ್ಕೂ ಸರ್ಕಾರ ಮಣಿಯದಿದ್ದರೆ, ರಾಜ್ಯಾದ್ಯಾಂತ ಹೋರಾಟವನ್ನು ತೀವ್ರಗೊಳಿಸಲಾಗುವುದು~ ಎಂದುಅವರು ಹೇಳಿದರು.

ಗೋಷ್ಠಿಯಲ್ಲಿ ಜೆಡಿಯು ಪ್ರಧಾನ ಕಾರ್ಯದರ್ಶಿ ಲೋಕಪಾಲ್ ಜೈನ್, ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.