ಲೋಕಾಯುಕ್ತ ನೇಮಕಾತಿ: ಸಲಹೆ ಕೇಳಿದ ಸಿಎಂ

7

ಲೋಕಾಯುಕ್ತ ನೇಮಕಾತಿ: ಸಲಹೆ ಕೇಳಿದ ಸಿಎಂ

Published:
Updated:

ಬೆಂಗಳೂರು: ನೂತನ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆಯ ಅಧ್ಯಕ್ಷರು, ವಿಧಾನ ಪರಿಷತ್ ಸಭಾಪತಿ ಮತ್ತು ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರಿಗೆ ಈ ಸಂಬಂಧ ಸಲಹೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅವರು ನಿವೇಶನ ವಿವಾದದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ಲೋಕಾಯುಕ್ತ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಅಂದಿನಿಂದ ಈ ಹುದ್ದೆ ಖಾಲಿಯೇ ಉಳಿದಿದೆ.ನೂತನ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಿರುವ ಮುಖ್ಯಮಂತ್ರಿ, 15 ದಿನಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಯೋಚನೆಯಲ್ಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry