ಗುರುವಾರ , ಏಪ್ರಿಲ್ 15, 2021
24 °C

ಲೋಕಾಯುಕ್ತ ನೇಮಕ ವಿಳಂಬ ಇಲ್ಲ: ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಿಗದಿ ಮಾಡಿರುವ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ಇತ್ಯರ್ಥಕ್ಕೆ ಬಾಕಿ ಇದೆ. ತೀರ್ಪಿಗಾಗಿ ಸರ್ಕಾರ ಕಾಯುತ್ತಿದೆ ಎಂದು ರಾಜ್ಯ ಸರ್ಕಾರ ಗುರುವಾರ ವಿಧಾನ ಪರಿಷತ್‌ಗೆ ತಿಳಿಸಿತು. ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ನಡೆಸಿ ಅಸಮಾಧಾನ ಹೊರಹಾಕಿದರು.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೆ. ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಗದೀಶ ಶೆಟ್ಟರ್, `ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿಲ್ಲ~ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.