ಶನಿವಾರ, ಮೇ 15, 2021
24 °C

ಲೋಕಾಯುಕ್ತ ರಾಜೀನಾಮೆ;ರಾಜ್ಯ ಸರ್ಕಾರವೇ ಹೊಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ರಾಜೀನಾಮೆ ನೀಡಬೇಕಾಗಿ ಬಂದ ಬೆಳವಣಿಗೆಗೆ ನೇರವಾಗಿ ರಾಜ್ಯ ಸರ್ಕಾರವೇ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ದೂರಿದರು.ಅವರು ನಗರದಲ್ಲಿ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕಾಯುಕ್ತ ನ್ಯಾಯಮೂರ್ತಿ ನೇಮಕ ಮಾಡುವಾಗ ರಾಜ್ಯ ಸರ್ಕಾರ ನ್ಯಾ. ಶಿವರಾಜ ಪಾಟೀಲ ಅವರ ಬಗೆಗಿನ ಎಲ್ಲ ಮಾಹಿತಿಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕಿತ್ತು. ಈಗ ಅವರ ವಿರುದ್ಧ ಕೇಳಿ ಬಂದಿರುವ ಆರೋಪವೂ ಸೇರಿದಂತೆ ಎಲ್ಲ ವಿಷಯಗಳ ಕುರಿತು ಮೊದಲೇ ಸ್ಪಷ್ಟೀಕರಣ ಪಡೆದಿದ್ದರೆ ರಾಜೀನಾಮೆ ನೀಡುವ ಪ್ರಮೇಯವೇ ಬರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.ಲೋಕಾಯುಕ್ತರ ನೇಮಕ ವಿಚಾರದಲ್ಲಿ ರಾಜ್ಯ ಸರ್ಕಾರ ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಆದರೆ, ರಾಜೀನಾಮೆ ನೀಡುವ ಮೂಲಕ ನ್ಯಾ.ಪಾಟೀಲ ಮಾದರಿ ಕೆಲಸ ಮಾಡಿದ್ದಾರೆ ಎಂದರು.ಇದು ಆತಂಕಪಡುವ ವಿಷಯವೂ ಹೌದು. ಭವಿಷ್ಯದಲ್ಲಿ ಇಂತಹ ಸಾಂವಿಧಾನಿಕ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಲು ಪ್ರಾಮಾಣಿಕರು ಹಿಂಜರಿಯಬಹುದು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.