ಭಾನುವಾರ, ಮೇ 9, 2021
26 °C

ಲೋಕಾಯುಕ್ತ ವರದಿ ಜಾರಿಗೆ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕಾಂಗ್ರೆಸ್ ಪಕ್ಷವು ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯ ಜಾರಿಗೆ ಆಗ್ರಹಿಸಿ  ಕೊಪ್ಪಳ ವಿಧಾನಸಭಾ ಉಪ ಚುನಾವಣೆಯ ಬಳಿಕ   ಕಾನೂನು ಮತ್ತು ರಾಜಕೀಯ ಹೋರಾಟ ನಡೆಸಲಿದೆ ಎಂದು ಮಾಜಿ ಸಚಿವ ಎಚ್. ಕೆ. ಪಾಟೀಲತಿಳಿಸಿದರು.ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯನ್ನು ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಮಹತ್ವದ ವರದಿಯನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸದಾನಂದಗೌಡ ಅವರು ಮೌನ ವಹಿಸುವ ಮೂಲಕ ಪಾರಾಗಲು ಪ್ರಯತ್ನಿಸುವುದು ಸಲ್ಲದು ಎಂದರು.ನೈತಿಕ ಹಕ್ಕಿಲ್ಲ: ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ನಡೆಸಲು ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಅವರಿಗೆ ನೈತಿಕ ಹಕ್ಕಿಲ್ಲ.  ಅಂತರರಾಷ್ಟ್ರೀಯ ಅಧ್ಯಯನ ಸಂಸ್ಥೆಯೊಂದರ ವರದಿ ಪ್ರಕಾರ ಕರ್ನಾಟಕ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಗುಜರಾತ್ ಎರಡನೇ ಸ್ಥಾನದಲ್ಲಿದೆ ಎಂದರು.ಅವಕಾಶ ನೀಡುವುದಿಲ್ಲ: ಭೂ ಬ್ಯಾಂಕ್ ಹೆಸರಲ್ಲಿ ರಾಜ್ಯದ ರೈತರ ಫಲವತ್ತಾದ 2 ಲಕ್ಷಕ್ಕೂ ಅಧಿಕ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾರೆಂದರೆ ಅವರಿಗೆ ಮನಸೋ ಇಚ್ಛೆ ಬಳಸಲು ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.