ಸೋಮವಾರ, ಮೇ 16, 2022
29 °C

ಲೋಕ್‌ಪಾಲ್ ಮಸೂದೆ ಚರ್ಚೆ: ಅಣ್ಣಾ ಹಜಾರೆಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): ಲೋಕ್‌ಪಾಲ್ ಮಸೂದೆ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಪ್ರಧಾನಿ ಮನ್‌ಮೋಹನ ಸಿಂಗ್ ಅವರು ಆಹ್ವಾನ ನೀಡಿದ್ದಾರೆ.  ಹಜಾರೆ ಅವರಿಗೆ ನೀಡಿರುವ ಆಹ್ವಾನವನ್ನು ಪ್ರಧಾನಿ ಕಚೇರಿಯ ಮೂಲಗಳು ದೃಢಪಡಿಸಿವೆ. ಅವರು ತಮಗೆ ಅನುಕೂಲವಾದ ಸಮಯದಲ್ಲಿ ಪ್ರಧಾನಿಯನ್ನು ಭೇಟಿಯಾಗಬಹುದು. ಮಸೂದೆ ಕುರಿತಂತೆ ಹಜಾರೆ  ಅಭಿಪ್ರಾಯಗಳನ್ನು ಪ್ರಧಾನಿ ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.ಭ್ರಷ್ಟಾಚಾರವನ್ನು ನಿಗ್ರಹಿಸಲು ಕಠಿಣ ಕಾಯಿದೆ ರೂಪಿಸುವ ನಿಟ್ಟಿನಲ್ಲಿ  ಮಾರ್ಚ್ ಅಂತ್ಯದೊಳಗೆ ಲೋಕ್‌ಪಾಲ್ ಮಸೂದೆ ಕುರಿತಂತೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳದಿದ್ದರೆ ಏಪ್ರಿಲ್ 5ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹಜಾರೆ ಬುಧವಾರ ಎಚ್ಚರಿಕೆ ನೀಡಿದ್ದರು. ದೇಶದ ಪ್ರಜೆಗಳ ಪ್ರತಿನಿಧಿಗಳ ಅಭಿಪ್ರಾಯ ಪಡೆಯದೆ ಭ್ರಷ್ಟಾಚಾರ ನಿಗ್ರಹ ಮಸೂದೆ ಮಂಡಿಸಲು ಮುಂದಾದ ಸರ್ಕಾರದ ಕ್ರಮದ ಕುರಿತು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.