ಶನಿವಾರ, ಮೇ 15, 2021
24 °C

ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ದೆಹಲಿ ಹೈಕೋರ್ಟ್ ಆವರಣದಲ್ಲಿ ಉಗ್ರರು ನಡೆಸಿದ ಬಾಂಬ್ ಸ್ಫೋಟವನ್ನು ಖಂಡಿಸಿ ವಕೀಲರು ಗುರುವಾರ ನ್ಯಾಯಾಲಯ ಕಲಾಪ ಬಹಿಷ್ಕರಿಸಿದರು.ದೆಹಲಿ ಹೈಕೋರ್ಟ್ ಆವರಣದಲ್ಲಿ ಉಗ್ರರು ಬಾಂಬ್ ಸ್ಫೋಟ ನಡೆಸಿರುವುದನ್ನು ವಕೀಲರು ಖಂಡಿಸಿದರು. ಬಾಂಬ್ ಸ್ಫೋಟ ನಡೆಸುವ ಮೂಲಕ ಮಾರಣ ಹೋಮ ನಡೆಸಿರುವುದು ನಾಗರಿಕ  ಸಮಾಜ ತಲೆತಗ್ಗಿಸುವಂತಹ ವಿಚಾರ. ಉಗ್ರರ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು.ನ್ಯಾಯಾಲಯದ ಆವರಣದಲ್ಲಿ ಮುಕ್ತ ವಾತಾವಾರಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ವಕೀಲರು ಆಗ್ರಹಿಸಿದರು. ವಕೀಲರು ಕಲಾಪದಿಂದ ದೂರ ಉಳಿದಿದ್ದರಿಂದ ನ್ಯಾಯಾಲಯದ ಆವರಣ ಬಣಗುಡು ತ್ತಿತ್ತು. ಮುಂಜಾಗ್ರತಾ ಕ್ರಮ ವಾಗಿ ನ್ಯಾಯಾಲಯದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.