ಭಾನುವಾರ, ಜೂನ್ 13, 2021
25 °C

ವಕೀಲರಿಂದ ಹಲ್ಲೆ: ಪೊಲೀಸ್ ಕುಟುಂಬಗಳಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಬೆಂಗಳೂರು (ಪಿಟಿಐ):  ಇಲ್ಲಿನ ಸಿವಿಲ್ ಕೋರ್ಟ್ ಆವರಣದಲ್ಲಿ ಈಚೆಗೆ ವಕೀಲರು, ಪೊಲೀಸರು ಮತ್ತು ಸುದ್ದಿ ಮಾಧ್ಯಮಗಳ ಸದಸ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸಿ, ಹಲ್ಲೆ ನಡೆಸಿದ್ದ ವಕೀಲರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ~ಕರ್ನಾಟಕ ರಾಜ್ಯ ಪೊಲೀಸ್ ಕುಟುಂಬ ಸದಸ್ಯರ ಸಂಘ~ದ ಕಾರ್ಯಕರ್ತರು ಗುರುವಾರ ಇಲ್ಲಿ ಮತಪ್ರದರ್ಶನ ನಡೆಸಿದರು.

ಸಂಘಕ್ಕೆ ಸೇರಿದ್ದ ನೂರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಈ ಮತಪ್ರದರ್ಶನದಲ್ಲಿ ಭಾಗವಹಿಸಿದ್ದರು. ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ವಕೀಲರು ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದ  ಪ್ರದರ್ಶನಾಕಾರರು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸದೇ, ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಮಾರ್ಚ್ 2 ರಂದು ಇಲ್ಲಿನ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಹಿಂಸಾಚಾರದಲ್ಲಿ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಸಂಘದ ಕಾರ್ಯಕರ್ತರು, ಘಟನೆ ನಡೆದು ಒಂದು ವಾರವಾದರೂ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಲ್ಲಿ ಸರ್ಕಾರ ಸೋತಿದೆ ಎಂದು ದೂರಿದ್ದಾರೆ.

ತಪ್ಪಿತಸ್ಥ ವಕೀಲರನ್ನು ತನಿಖೆಗೊಳಪಡಿಸುವಲ್ಲಿ ಸರ್ಕಾರ ಹಿಂದೇಟು ಹಾಕಿದರೆ, ಉಗ್ರವಾದ ಹೋರಾಟವನ್ನು ನಡೆಸುವುದಾಗಿ  ~ಕರ್ನಾಟಕ ರಾಜ್ಯ ಪೊಲೀಸ್ ಕುಟುಂಬ ಸದಸ್ಯರ ಸಂಘ~ದ ಕಾರ್ಯಕರ್ತರು ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.