ವಕೀಲರ ಕ್ಷಮೆಯಾಚಿಸಿದ ಜಿಲ್ಲಾಧಿಕಾರಿ

ಸೋಮವಾರ, ಮೇ 20, 2019
30 °C

ವಕೀಲರ ಕ್ಷಮೆಯಾಚಿಸಿದ ಜಿಲ್ಲಾಧಿಕಾರಿ

Published:
Updated:

ಚಿತ್ರದುರ್ಗ: ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಗುರುವಾರ ವಕೀಲರ ಕ್ಷಮೆಯಾಚಿಸಿ ಬಿಕ್ಕಟ್ಟನ್ನು ಶಮನಗೊಳಿಸಿದರು.ಬುಧವಾರ ಜಿಲ್ಲಾಧಿಕಾರಿ ನ್ಯಾಯಾಲಯದ ಕಲಾಪ ಸಂದರ್ಭದಲ್ಲಿ ವಕೀಲ ಇ. ತಿಪ್ಪೇಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ವಕೀಲರು ದಿಢೀರ್ ಪ್ರತಿಭಟನೆ ನಡೆಸಿ ಕ್ಷಮೆಯಾಚನೆಗೆ ಆಗ್ರಹಿಸಿದ್ದರು.ಗುರುವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ವಕೀಲರ ಭವನದಲ್ಲಿ ಸಭೆ ನಡೆಸಿ ಜಿಲ್ಲಾಧಿಕಾರಿ ಕ್ಷಮೆಯಾಚಿಸುವವರೆಗೂ ಕಲಾಪಕ್ಕೆ ಹಾಜರಾಗಬಾರದು ಎಂದು ನಿರ್ಣಯ ಕೈಗೊಂಡರು.ಬೆಳಿಗ್ಗೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ಅವರು, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶ್‌ಕುಮಾರ್ ಅವರನ್ನು ಭೇಟಿಯಾಗಿ ಘಟನೆಯ ವಿವರಗಳನ್ನು ನೀಡಿ ಸಮಾಲೋಚನೆ ನಡೆಸಿದರು.ನಂತರ ವಕೀಲರ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶಕುಮಾರ್, ವಕೀಲರಿಗೆ ವಾದ ಮಂಡಿಸುವ ಹಕ್ಕು ಇದೆ. ವಕೀಲರಿಗೆ ಹೊರಗೆ ಹೋಗಿ ಎಂದು ಹೇಳಿದ್ದು ತಪ್ಪು. ಕಲಾಪದ ಸಮಯದಲ್ಲಿ ಹೊರಗೆ ಹಾಕುವುದು ತಪ್ಪು. ನಿಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ.ಜಿಲ್ಲಾಧಿಕಾರಿ ನಮ್ಮ ಬಳಿ ಕ್ಷಮೆ ಕೋರಿದ್ದರು. ಆದರೆ, ಪದಾಧಿಕಾರಿಗಳು ಒತ್ತಾಯಿಸಿದ್ದರಿಂದ ಇಲ್ಲಿಗೆ ಆಗಮಿಸಿದ್ದಾರೆ. ವಕೀಲರು ಸಹ ಎಲ್ಲ ಸಿದ್ಧತೆಗಳೊಂದಿಗೆ ನ್ಯಾಯಾಲಯದ ಕಲಾಪಗಳಿಗೆ ಆಗಮಿಸಿದರೆ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಸಾಧ್ಯವಾಗುತ್ತದೆ ಎಂದು ನುಡಿದರು.ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮಾತನಾಡಿ, ಬಾಕಿ ಇರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಸಹಕಾರ ನೀಡಬೇಕು. ಅನೇಕ ವರ್ಷಗಳಿಂದ ಪ್ರಕರಣಗಳು ಬಾಕಿ ಉಳಿದಿದ್ದು, ನ್ಯಾಯಾಲಯಕ್ಕೆ ಅಲೆದಾಡುವುದರಿಂದ ಜನ ಸಾಮಾನ್ಯರಿಗೆ ಕಷ್ಟವಾಗುತ್ತದೆ. ಯಾವದೇ ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು ಎಂದು ನುಡಿದರು. ಈ ಮಾತುಗಳಿಂದ ಅಸಮಾಧಾನಗೊಂಡ ವಕೀಲರು, ನಿಮ್ಮ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.ವಕೀಲರಿಗೆ ಹೊರಗೆ ಹೋಗಿ ಎಂದು ಹೇಳಿದ್ದು ತಪ್ಪು. ಅದು ತಮಗೆ ಅರಿವಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯುವುದಿಲ್ಲ. ಎಲ್ಲರೂ ಒಟ್ಟಾಗಿ ಹೋಗೋಣ ಎಂದು ನುಡಿದು ಪ್ರಕರಣವನ್ನು ಅಂತ್ಯಗೊಳಿಸಿದರು.ವಕೀಲರ ಸಂಘದ ಅಧ್ಯಕ್ಷ ಬಿ.ಕೆ. ರಹಮತ್‌ವುಲ್ಲಾ, ಪ್ರಧಾನ ಕಾರ್ಯದರ್ಶಿ ಶಿವು ಯಾದವ್ ಮತ್ತಿತರರು ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry