ಬೆಂಗಳೂರು: ವಕೀಲಿ ವೃತ್ತಿ ಮೂಲಕ ಜನರಿಗೆ ನ್ಯಾಯ ದೊರಕಿಸಿಕೊಡಬೇಕಾದ ವಕೀಲರೇ ಕಾನೂನು ಉಲ್ಲಂಘಿಸಿ ಪ್ರತಿಭಟನೆಗಿಳಿಯುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಜನತಾದರ್ಶನ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, `ವಕೀಲರು ಕಾನೂನಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ತೊಂದರೆ ನೀಡಿರುವುದು ಸಮರ್ಥನೀಯ ನಡವಳಿಕೆಯಲ್ಲ. ವಕೀಲರಾಗಲೀ, ಪೊಲೀಸರಾಗಲೀ ಕಾನೂನು ಕೈಗೆತಿಕೊಳ್ಳಲು ಯಾರಿಗೂ ಅವಕಾಶವಿಲ್ಲ~ ಎಂದರು.

`ಪರಿಸ್ಥಿತಿ ಈ ಹಂತಕ್ಕೆ ಹೋಗಬಾರದಿತ್ತು. ವಕೀಲರು ಮತ್ತು ಪೊಲೀಸರ ನಡುವೆ ಉಂಟಾಗಿರುವ ಸಂಘರ್ಷವನ್ನು ಮಾತುಕತೆ ಮೂಲಕ ಪರಿಹರಿಸಲು ಪ್ರಯತ್ನಿಸಲಾಗುವುದು. ಈ ಪ್ರತಿಭಟನೆ ವೇಳೆ ಪೊಲೀಸರು ತಾಳ್ಮೆಯಿಂದ ನಡೆದುಕೊಂಡಿದ್ದಾರೆ. ಸಮಸ್ಯೆ ಇತ್ಯರ್ಥಪಡಿಸುವ ಜವಾಬ್ದಾರಿಯನ್ನು ಸಚಿವರಾದ ಆರ್.ಅಶೋಕ ಮತ್ತು ಎಸ್.ಸುರೇಶ್ಕುಮಾರ್ ಅವರಿಗೆ ವಹಿಸಲಾಗಿದೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತುಮಕೂರಿನಲ್ಲಿ ಪ್ರವಾಸ ಕೈಗೊಂಡಿರುವ ಕುರಿತು ಕೇಳಿದಾಗ, `ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನನಗಾಗಿ ಕಾಯುವುದು ಬೇಡ ಎಂದು ಶಾಸಕರಿಗೆ ಮನವಿ ಮಾಡಿದ್ದೇನೆ. ಅದರಂತೆ ಈ ಸಭೆ ನಡೆದಿದೆ. ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.