ಬುಧವಾರ, ಜೂನ್ 23, 2021
21 °C

ವಕೀಲರ ರ‌್ಯಾಲಿಗೆ ಅನುಮತಿ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  `ಬೆಂಗಳೂರು ವಕೀಲರ ಸಂಘ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ವಕೀಲರ ಸಂಘಗಳ ಸದಸ್ಯರು ನಗರದಲ್ಲಿ ಮಂಗಳವಾರ (ಮಾ.20) ನಡೆಸಲು ಉದ್ದೇಶಿಸಿರುವ ಪ್ರತಿಭಟನಾ ರ‌್ಯಾಲಿಗೆ ಅನುಮತಿ ನಿರಾಕರಿಸಲಾಗಿದೆ~ ಎಂದು ಕೇಂದ್ರ ವಿಭಾಗದ ಡಿಸಿಪಿ ಡಾ.ಜಿ.ರಮೇಶ್ `ಪ್ರಜಾವಾಣಿ~ಗೆ ತಿಳಿಸಿದರು.ಸಿಟಿ ಸಿವಿಲ್ ನ್ಯಾಯಾಲಯ ಆವರಣದಿಂದ ವಿಧಾನಸೌಧದವರೆಗೆ ಮಂಗಳವಾರ ಬೆಳಿಗ್ಗೆ ಪ್ರತಿಭಟನಾ ರ‌್ಯಾಲಿ ನಡೆಸಲು ಅನುಮತಿ ನೀಡಬೇಕೆಂದು ಬೆಂಗಳೂರು ವಕೀಲರ ಸಂಘದ ಸದಸ್ಯರು ಮನವಿ ಸಲ್ಲಿಸಿದ್ದರು. ಆದರೆ, ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ವಕೀಲರ ಪ್ರತಿಭಟನಾ ರ‌್ಯಾಲಿಗೆ ಅನುಮತಿ ನೀಡಿಲ್ಲ ಎಂದು ಅವರು ಹೇಳಿದರು.ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನಾ ರ‌್ಯಾಲಿ ನಡೆಸಿದಂತಹ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ವಕೀಲರ ಸಂಘದ ಸದಸ್ಯರೇ ಹೊಣೆಯಾಗಬೇಕಾಗುತ್ತದೆ. ಅಲ್ಲದೇ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನಾ ರ‌್ಯಾಲಿ ನಡೆಸುವ ವಕೀಲರ ವಿರುದ್ಧ ಕಾನೂನು ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುತ್ತದೆ.ವಕೀಲರು ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐದು ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ರಮೇಶ್ ಅವರು ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.