ಭಾನುವಾರ, ಜೂನ್ 13, 2021
21 °C

ವಕೀಲರ ಸಂಘದ ತೀರ್ಮಾನ : ಬೇಡಿಕೆ ಈಡೇರದಿದ್ದರೆ ವಿಧಾನಸೌಧ ಮುತ್ತಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಸರ್ಕಾರ ಇದೇ 19ರೊಳಗೆ ಈಡೇರಿಸಬೇಕು ಎಂದು ಆಗ್ರಹಿಸಿರುವ ಬೆಂಗಳೂರು ವಕೀಲರ ಸಂಘ, ಬೇಡಿಕೆಗಳು ಈಡೇರುವವರೆಗೆ ನ್ಯಾಯಾಲಯಗಳ ಕಲಾಪ ಬಹಿಷ್ಕಾರ ಮುಂದುವರಿಸಲು ನಿರ್ಧರಿಸಿದೆ.`ಗಡುವಿನೊಳಗೆ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾದಲ್ಲಿ, 20ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು. ಇದರಲ್ಲಿ ರಾಜ್ಯದ ಎಲ್ಲ ಭಾಗಗಳ ವಕೀಲರು ಪಾಲ್ಗೊಳ್ಳಲಿದ್ದಾರೆ~ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಪಿ. ರಂಗನಾಥ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆ.ಎನ್. ಸುಬ್ಬಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಕೀಲರ ಸಂಘದ ವಿಶೇಷ ತುರ್ತು ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.ನಗರ ಸಿವಿಲ್ ನ್ಯಾಯಾಲಯಗಳ ಸಂಕೀರ್ಣದಲ್ಲಿ ಇದೇ 2ರಂದು ನಡೆದ ಅಹಿತಕರ ಘಟನೆಗಳ ನಂತರ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಮತ್ತು ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಕೀಲರು ನ್ಯಾಯಾಲಯ ಕಲಾಪ ಬಹಿಷ್ಕರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.