ಚಿತ್ರದುರ್ಗ: `ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ ವಕೀಲರ ಪ್ರತಿಭಟನೆ ಅತ್ಯಂತ ಖಂಡನೀಯ ಮತ್ತು ವಿಷಾದನೀಯವಾಗಿದ್ದು, ವೃತ್ತಿ ಧರ್ಮಕ್ಕೆ ಕಪ್ಪುಚುಕ್ಕೆಯಾಗಿದೆ~ ಎಂದು ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಚಿತ್ರದುರ್ಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ವಿ. ಜಗನ್ನಾಥನ್ ಅಭಿಪ್ರಾಯಪಟ್ಟರು.

ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಶನಿವಾರ ಜಿಲ್ಲಾ ವಕೀಲರ ಕಚೇರಿಗಳ ಸಮನ್ವಯ ಕಟ್ಟಡದ ಶಿಲಾನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.

`ವಕೀಲರು ದಾರಿದೀಪವಾಗಬೇಕು. ಸಾರ್ವಜನಿಕರ ಹಕ್ಕುಗಳನ್ನು ರಕ್ಷಿಸುವಲ್ಲಿ ವಕೀಲರ ಪಾತ್ರ ಮಹತ್ವದ್ದು. ಆದರೆ, ಇತ್ತೀಚೆಗೆ ಬೆಂಗಳೂರು ಮತ್ತು ಇತರೆಡೆಗಳಲ್ಲಿ ವಕೀಲರು ಪ್ರತಿಭಟನೆ ನಡೆಸಿ ಕಲಾಪ ಬಹಿಷ್ಕರಿಸಿದರು.

ನ್ಯಾಯಾಂಗ ವ್ಯವಸ್ಥೆಯಲ್ಲಿ ಇದೊಂದು ಕಪ್ಪುಚುಕ್ಕೆ ನಡೆದು ಹೋಗಿದೆ. ಈ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಹಿರಿಯ ವಕೀಲರೊಬ್ಬರು ತಮಗೆ ಈ ವೃತ್ತಿಯೇ ಬೇಡವೆನಿಸುತ್ತಿದೆ ಎಂದು ನೊಂದು ನುಡಿದರು. ಆದ್ದರಿಂದ ಈ ರೀತಿಯ ಘಟನೆಗಳು ಮರುಕಳಿಸಬಾರದು~ ಎಂದರು.

2011ರಲ್ಲಿ ಸುಪ್ರೀಂಕೋರ್ಟ್ ವಕೀಲ ವೃತ್ತಿಯ ಬಗ್ಗೆ ಅತ್ಯುತ್ತಮವಾದ ಹೇಳಿಕೆ ನೀಡಿದೆ. `ಕಾನೂನು ಎತ್ತಿ ಹಿಡಿಯುವ ಜವಾಬ್ದಾರಿ ವಕೀಲರಿಗಿದೆ. ವಕೀಲರು ಕಾನೂನು ಉಲ್ಲಂಘಿಸಿದರೆ ದುರದೃಷ್ಟಕರ~ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆದ್ದರಿಂದ ವಕೀಲ ವೃತ್ತಿಯ ಗೌರವ, ಘನತೆ ಕಾಪಾಡಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.