ಶುಕ್ರವಾರ, ಮೇ 14, 2021
35 °C

ವಕ್ಫ್ ಆಸ್ತಿ ಕಬಳಿಕೆ; ತನಿಖೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ವಕ್ಫ್ ಮಂಡಳಿಯ ಆಸ್ತಿ ಕಬಳಿಕೆ ಕುರಿತು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರು ಸಲ್ಲಿಸಿದ ವರದಿ ಕುರಿತು ಪತ್ರಿಕೆಯಲ್ಲಿ  ಓದಿ ಅಚ್ಚರಿಯಾಯಿತು. ಈ ವರದಿ ಬಗ್ಗೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದು ಗೊತ್ತಾಗಿಲ್ಲ.

 

ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ದುರುದ್ದೇಶದಿಂದ ಸುಳ್ಳು ವರದಿ ನೀಡಿದ್ದಾರೆ ಎಂದು ಅನೇಕ ಹಿರಿಯ ಮುಸ್ಲಿಂ ಮುಖಂಡರು ಹೇಳಿದ್ದಾರೆ. ಇದರಿಂದ  ಮುಸ್ಲಿಮರಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು. ವಕ್ಫ್ ಆಸ್ತಿ ಕಬಳಿಸಿದ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಸಕ್ತಿ ಇದ್ದಂತೆ ಕಾಣುವುದಿಲ್ಲ. ಈ ವರದಿಯನ್ನು ಇಟ್ಟುಕೊಂಡು ಆಡಳಿತ ಪಕ್ಷ ಬಿಜೆಪಿ ಚುನಾವಣೆ ಸಂದರ್ಭದಲ್ಲಿ ರಾಜಕೀಯ ದುರ್ಲಾಭ ಪಡೆಯುವ ಸಾಧ್ಯತೆಗಳಿವೆ. ಅದಕ್ಕೆ ಅವಕಾಶ ಕೊಡಬಾರದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.