ಗುರುವಾರ , ಮೇ 13, 2021
40 °C

ವಕ್ಫ್ ಪ್ರಕರಣ: ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಗೆ ಸೇರಿದ ಆಸ್ತಿ ಕಬಳಿಕೆ ಮತ್ತು ದುರುಪಯೋಗ ಪ್ರಕರಣಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ್ ಸರ್ಕಾರವನ್ನು ಒತ್ತಾಯಿಸಿದರು. `ರಾಜ್ಯದ ವಕ್ಫ್ ಆಸ್ತಿಯನ್ನು ದುರುಪಯೋಗ ಮಾಡಿಕೊಂಡಿರುವ ರಾಜಕೀಯ ಮುಖಂಡರ ಪಟ್ಟಿಯಲ್ಲಿ ನನ್ನ ಹೆಸರೂ ಇದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬೇಸರವಾಯಿತು.

 

ನಾನು ವಕ್ಫ್ ಮಂಡಳಿಯ ಸದಸ್ಯನಾಗಿದ್ದಾಗ ಪ್ರಯಾಣ, ಸಭಾ ಭತ್ಯೆಯನ್ನೂ ಪಡೆದುಕೊಳ್ಳುತ್ತಿರಲಿಲ್ಲ. ಧಾರ್ಮಿಕ ಕೆಲಸಕ್ಕಾಗಿ ಮೀಸಲಿಟ್ಟಿರುವ ಆಸ್ತಿಯ ದುರುಪಯೋಗ ನನ್ನಿಂದ ಆಗಿಲ್ಲ~ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.`ಆಯೋಗ ಸಲ್ಲಿಸಿರುವ ವರದಿಯ ಪ್ರತಿ ನನಗೆ ದೊರೆತಿಲ್ಲ. ವರದಿಯ ಪ್ರತಿ ನೀಡುವಂತೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರನ್ನು ಕೋರಿದ್ದೇನೆ. ಅವರು ಕೊಡದಿದ್ದರೆ, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದುಕೊಳ್ಳುವೆ. ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರ ಪ್ರಾಮಾಣಿಕತೆಯನ್ನು ಅನುಮಾನದಿಂದ ನೋಡುತ್ತಿಲ್ಲ. ಆದರೆ ವರದಿಯಲ್ಲಿ ನನ್ನ ಹೆಸರು ಸೇರಿಸುವ ಮೊದಲು ಒಂದು ನೋಟಿಸ್ ಕೂಡ ನೀಡಿಲ್ಲ~ ಎಂದು ಬೇಸರ ವ್ಯಕ್ತಪಡಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.