ಸೋಮವಾರ, ಏಪ್ರಿಲ್ 12, 2021
23 °C

ವಕ್ಫ್ ಮಂಡಳಿ ಅಕ್ರಮ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ವಕ್ಫ್  ಮಂಡಳಿಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ಸಲ್ಲಿಸಿರುವ ವರದಿಯಲ್ಲಿನ ಸತ್ಯಾಂಶಗಳನ್ನು ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು~ ಎಂದು ವಕ್ಫ್ ಆಸ್ತಿ ಬಚಾವೋ ಆಂದೋಲನ ಸಮಿತಿ ಅಧ್ಯಕ್ಷ ಮಹಮದ್ ಇಲಿಯಾಸ್ ಹೇಳಿದರು.`ವಕ್ಫ್  ಮಂಡಳಿಗೆ ಮೊದಲು 54 ಸಾವಿರ ಎಕರೆ ಆಸ್ತಿಯಿತ್ತು. ಆದರೆ ಈಗ ಬರೀ 18 ಸಾವಿರ ಎಕರೆ ಉಳಿದಿದೆ. ಇದನ್ನು ರಕ್ಷಿಸದಿದ್ದರೆ, ಮುಂದೆ ಮಂಡಳಿಗೆ ಏನೂ ಉಳಿಯುವುದಿಲ್ಲ~ ಎಂದು ಗುರುವಾರ ಪತ್ರಿಕಾಗೋಷ್ಠಿ ಹೇಳಿದರು.`ವಕ್ಫ್  ಮಂಡಳಿಯಲ್ಲಿ ನಡೆಯುತ್ತಿರುವ ಅನ್ಯಾಯಗಳು ಮತ್ತು  ಮುಸ್ಲಿಂ ಸಮುದಾಯದವರಲ್ಲಿ ಜಾಗೃತಿ ಮೂಡಿಸಲುಆಂದೋಲನ ಹಮ್ಮಿಕೊಳ್ಳಲಾಗುವುದು~ ಎಂದರು. ಗೋಷ್ಠಿಯಲ್ಲಿ ಸದಸ್ಯ ಜಿ.ಎಂ.ಶರೀಫ್ ಮತ್ತಿತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.