ಗುರುವಾರ , ಏಪ್ರಿಲ್ 15, 2021
26 °C

ವಚನಗಳು ಇಂದಿಗೂ ಪ್ರಸ್ತುತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಮನುಷ್ಯನ ಬದುಕು ಬದಲಿಸುವ ಶಕ್ತಿ ವಚನ ಸಾಹಿತ್ಯಕ್ಕಿದೆ. ಹೀಗಾಗಿ, ಇಂದಿಗೂ ಶರಣರ ವಚನಗಳು ಪ್ರಸ್ತುತವಾಗಿವೆ~ ಎಂದು ಹರವೆ ವಿರಕ್ತಮಠದ ಸರ್ಪಭೂಷಣ ಸ್ವಾಮೀಜಿ ಹೇಳಿದರು.ನಗರದಲ್ಲಿ ಸೋಮವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆಯಿಂದ ಹಮ್ಮಿಕೊಂಡಿದ್ದ ವೇದಿಕೆಯ 9ನೇ ವಾರ್ಷಿಕೋತ್ಸವ ಹಾಗೂ `ಕದಳಿ ಸಿರಿ~ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.12ನೇ ಶತಮಾನದಲ್ಲಿ ಬಸವಣ್ಣ ಮಹಿಳೆಯರಿಗೆ ಸಮಾನತೆ ನೀಡಿದ್ದರು. ಅನುಭವ ಮಂಟಪದಲ್ಲಿ ಎಲ್ಲ ವರ್ಗದವರಿಗೆ ಅವಕಾಶ ಕಲ್ಪಿಸಿದ್ದರು. ಮಹಿಳೆಯರಿಗೂ ಸೂಕ್ತ ಸ್ಥಾನಮಾನ ನೀಡಲಾಗಿತ್ತು ಎಂದ ಅವರು, ಸಮಾಜದಲ್ಲಿ ಗೃಹಿಣಿಯ ಪಾತ್ರ ಶ್ರೇಷ್ಠವಾದುದು. ಆಕೆ ಕೌಟುಂಬಿಕವಾಗಿ ಸಲ್ಲಿಸುವ ಸೇವೆ ಮಾದರಿಯಾಗಿದೆ ಎಂದು ಹೇಳಿದರು.ಮರಿಯಾಲದ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, `ಅಕ್ಕಮಹಾದೇವಿ, ಆಯ್ದಕ್ಕಿ ಲಕ್ಕಮ್ಮ ಸೇರಿದಂತೆ ಶರಣೆಯರು ಬರೆದಿರುವ ವಚನಗಳನ್ನು ಅಧ್ಯಯನ ಮಾಡಿದರೆ ಸಾಲದು. ಅವುಗಳ ಆಚರಣೆಗೆ ಒತ್ತು ನೀಡಬೇಕು~ ಎಂದು ಸಲಹೆ ನೀಡಿದರು.`ಕದಳಿ ಸಿರಿ~ ಪ್ರಶಸ್ತಿ ಸ್ವೀಕರಿಸಿದ ಮೈಸೂರಿನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ಎಸ್.ಪಿ. ಉಮಾದೇವಿ ಮಾತನಾಡಿ, `ಜಾಗತೀಕರಣದ ಪರಿಣಾಮ ಬದುಕು ಯಾಂತ್ರೀಕರಣಗೊಂಡಿದೆ. ಹೀಗಾಗಿ, ಯಾರೊಬ್ಬರ ಬದುಕು ನಿರಾತಂಕವಾಗಿಲ್ಲ. ಬದುಕಿನ ಸಾರ್ಥಕತೆ ಪಡೆಯಲು ಮುಂದಾಗಬೇಕು. ಎಲ್ಲರೊಂದಿಗೂ ಪ್ರೀತಿ, ವಾತ್ಸಲ್ಯದಿಂದ ಜೀವನ ನಡೆಸಬೇಕು~ ಎಂದು ಹೇಳಿದರು.ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಸಿದ್ದಮಲ್ಲೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ನೇತೃತ್ವವಹಿಸಿದ್ದರು. ಮೊರಾರ್ಜಿ ದೇಸಾಯಿ ವಸತಿಶಾಲೆಯ ಪ್ರಾಂಶುಪಾಲರಾದ ಎಂ.ಆರ್. ಸವಿತಾ ಅವರನ್ನು ಸನ್ಮಾನಿಸಲಾಯಿತು.

 

ಪ್ರಾಧ್ಯಾಪಕ ವಿಶ್ವನಾಥ್, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಎಸ್. ನಾಗರಾಜಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಶರಣ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪುಟ್ಟಮಲ್ಲಪ್ಪ, ಮೂಡ್ಲುಪುರ ನಂದೀಶ್, ಆರ್.ಎಂ. ಸ್ವಾಮಿ, ಕದಳಿ ವೇದಿಕೆಯ ಅಧ್ಯಕ್ಷೆ ಮಾದಲಾಂಬಿಕ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.