ವಚನ ಸಾಹಿತ್ಯ ಕಣ್ಮರೆ: ವಿಷಾದ

7

ವಚನ ಸಾಹಿತ್ಯ ಕಣ್ಮರೆ: ವಿಷಾದ

Published:
Updated:

ಚಾಮರಾಜನಗರ: ಸಂದೇಶ ಸಾರುವ ವಚನ ಸಾಹಿತ್ಯ ಪರಂಪರೆ ಕಣ್ಮರೆಯಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗಶ್ರೀ ಬುಧವಾರ ವಿಷಾದ ವ್ಯಕ್ತಪಡಿಸಿದರು.ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದಲ್ಲಿ ವೀರಶೈವ ನೌಕರರ ಕ್ಷೇಮಾಭಿವೃದ್ದಿ ಸಂಘ, ವೀರಶೈವ ಮಹಾಸಭಾ ತಾಲ್ಲೂಕು ಘಟಕ, ಕದಳಿ ಮಹಿಳಾ ವೇದಿಕೆ ವತಿಯಿಂದ ಬುಧವಾರ ನಡೆದ ಕಾರ್ತಿಕೋತ್ಸವ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ. ಅವರ ತತ್ವ ಸಿದ್ಧಾಂತವನ್ನು ತಿಳಿದುಕೊಂಡು ನಡೆಯಬೇಕೆಂದು ಸಲಹೆ ನೀಡಿದರು.ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ನಂದೀಶ್ ಮೂಡಲಪುರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೀರಶೈವ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಆರ್.ಎಂ.ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ಉಪಾಧ್ಯಕ್ಷ ಮಹಾದೇವಪ್ಪ, ಹಾಪ್‌ಕಾಮ್ ಅಧ್ಯಕ್ಷ ಕೋಡಿಮೋಳೆ ರಾಜಶೇಖರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಸವಣ್ಣ, ಎಪಿಎಂಸಿ ಅಧ್ಯಕ್ಷ ತೀಥೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಪಾಪಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಬಸವಣ್ಣ, ಕೈಗಾರಿಕಾ ಸಹಕಾರ ಬ್ಯಾಂಕ್ ಅಧ್ಯಕ್ಷ ಶಿವಸ್ವಾಮಿ, ರೋಟರಿ ಅಧ್ಯಕ್ಷ ಎಂ.ಮಹೇಶ್, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಶಿವಪ್ರಸಾದ್, ಲಯನ್ಸ್ ಸಂಸ್ಥೆ ಅಧ್ಯಕ್ಷ ಬಿ.ಎಂ.ಪ್ರಭುಸ್ವಾಮಿ, ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ಎಲ್.ಸುರೇಶ್, ಕೈಗಾರಿಕಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ವೀರಭದ್ರಸ್ವಾಮಿ, ಆರ್‌ಟಿಒ ಅಧೀಕ್ಷಕ ಕೆ.ಪಿ.ಶಾಂತಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ವೈ.ಎಂ.ಸಿದ್ದರಾಜು, ಮತ್ತು ಶಿಕ್ಷಕ ಬಿ.ಎಸ್.ವಿನಯ್ ಅವರನ್ನು ಸನ್ಮಾನಿಸಲಾಯಿತು.ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮೀಜಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಪುಟ್ಟಮಲ್ಲಪ್ಪ,  ಮಾದಲಾಂಬಿಕೆ ನಂಜುಂಡಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry