ಶುಕ್ರವಾರ, ಏಪ್ರಿಲ್ 23, 2021
23 °C

ವನ್ಯಜೀವಿಗೆ ಕುಡಿಯುವ ನೀರಿನ ಸಮಸ್ಯೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಓಂಕಾರ ಅರಣ್ಯ ಪ್ರದೇಶದ ಬೋಳೇಗೌಡನಕಟ್ಟೆ ಪ್ರದೇಶದಲ್ಲಿ ಕೆರೆ ಕಟ್ಟೆಗಳು ಬತ್ತಿ ಹೋಗಿರುವುದರಿಂದ ಕಾಡುಮೃಗಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.ಈ ಭಾಗದಲ್ಲಿನ ಕೆರೆಕಟ್ಟೆಗಳಲ್ಲಿ ಮಳೆಯ ನೀರು ಸಂಗ್ರಹವಾಗುತ್ತಿದ್ದರಿಂದ ಕಾಡು ಮೃಗಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರಲಿಲ್ಲ, ಆದರೆ ಈ ವರ್ಷ ಬೋಳೇಗೌಡನಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕಟ್ಟೆಗಳಲ್ಲಿ ಮಳೆಯ ನೀರು ಸಂಗ್ರಹವಾಗದೇ ಇರುವುದರಿಂದ ಕಾಡುಮೃಗಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.ಈ ಪ್ರದೇಶದ ಕಾಡಾನೆಗಳು ಕುಡಿಯುವ ನೀರನ್ನು ಹರಸಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನ ಪ್ರದೇಶಕ್ಕೆ ಹೋಗ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಅರಣ್ಯ ಇಲಾಖೆ ವತಿಯಿಂದ ಕಾಡಿನ ಮಧ್ಯ ಭಾಗದಲ್ಲಿ ಹೊಂಡಗಳನ್ನು ತೆಗೆಸಿದರೆ ಕಾಡಾನೆಗಳಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.ಅರಣ್ಯ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ಸರಿಯಾಗಿ ಮೇವು ಸಿಗದ ಕಾರಣ ಕಾಡಾನೆಗಳು ಕಾಡಂಚಿನ ಗ್ರಾಮಗಳ ಜಮೀನುಗಳಿಗೆ ಬಂದು ಬೆಳೆಯನ್ನು ನಾಶಪಡಿಸುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.ಕಾಡಂಚಿನಲ್ಲಿರುವ ಗ್ರಾಮ ಪಂಚಾಯಿತಿಗಳ ಮೂಲಕ ರಾಷ್ಟ್ರೀಯ ಉದ್ಯೋಗ ಭರವಸೆ ಯೋಜನೆಯಡಿಯಲ್ಲಾಗಲಿ ಅಥವಾ ದಿನಗೂಲಿ ನೌಕರರುಗಳನ್ನು ನೇಮಿಸಿಕೊಂಡು ಕಾಡಿನ ಮಧ್ಯದೊಳಗೆ ಹೊಂಡಗಳನ್ನು ತೆಗೆಸಿದರೆ ಕಾಡುಮೃಗಗಳಿಗೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಕಮಟ್ಟಿಗೆ ಬಗೆ ಹರಿಸಬಹುದಾಗಿದೆ ಎಂದು ಹೊಸಪುರ, ಕುರುಬರಹುಂಡಿ ಹಾಗೂ ಶ್ರೀಕಂಠಪುರ ಗ್ರಾಮಸ್ಥರು ಹೇಳುತ್ತಾರೆ.ಇನ್ನಾದರೂ ಅರಣ್ಯ ಇಲಾಖೆಯವರು ಕಾಡಿನ ಮಧ್ಯಭಾಗದಲ್ಲಿ ಮಳೆಗೆ ಮುಂಚಿತವಾಗಿ ಹೊಂಡಗಳನ್ನು ತೆಗೆಸಿದರೆ ಕಾಡಾನೆಗಳಿಗೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿಸಬಹುದಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.