ಭಾನುವಾರ, ಜೂನ್ 13, 2021
21 °C

ವರದ ಬಾಲಾಂಜನೇಯಸ್ವಾಮಿ ರಥೋತ್ಸವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಪಟ್ಟಣದಲ್ಲಿ ಭಾನುವಾರ ವರದ ಬಾಲಾಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಅಪಾರ ಜನ ರಥೋತ್ಸವದಲ್ಲಿ ಭಾಗವಹಿಸಿದ್ದರು. ಗ್ರಾಮೀಣ ಪ್ರದೇಶದಿಂದ ಎತ್ತಿನ ಗಾಡಿಯಲ್ಲಿ ತರಲಾಗಿದ್ದ ಪಾನಕ ವಿತರಿಸಲಾಯಿತು. ಬೇರೆ ಬೇರೆ ಸಂಘಟನೆಗಳು ಅನ್ನಸಂತರ್ಪಣೆ ಏರ್ಪಡಿಸಿದ್ದವು. ಜಾತ್ರೆಯಲ್ಲಿ ತಿಂಡಿ ತಿನಿಸು, ಬಲೂನ್‌, ಕೊಳಲು ಮತ್ತಿತರ ಮಕ್ಕಳ ಆಟಿಕೆಗಳ ಭರ್ಜರಿ ವ್ಯಾಪಾರ ನಡೆಯಿತು.

ಶಾಸಕ ಕೆ.ಆರ್‌.ರಮೇಶ್‌ ಕುಮಾರ್ ರಥೋತ್ಸವಕ್ಕೆ ಚಾಲನೆ ನೀಡಿದರು. ಮುಖಂಡರಾದ ನಾರಾಯಣಸ್ವಾಮಿ, ಬಾಬುರೆಡ್ಡಿ, ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್, ನಾರಾಯಣಸ್ವಾಮಿ, ಶ್ರೀನಿವಾಸ್, ಪುರಸಭೆ ಅಧ್ಯಕ್ಷ್ಷ ಸಯ್ಯದ್ ಅಬ್ದುಲ್ ಸತ್ತಾರ್ ಮತ್ತಿತರರು ಉಪಸ್ಥಿತರಿದ್ದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ ನಡೆಯಿತು. ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ತೂಪಲ್ಲಿ ಆರ್‌.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್‌ ರಥೋತ್ಸವದಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.