ಭಾನುವಾರ, ಏಪ್ರಿಲ್ 11, 2021
27 °C

ವರಿಷ್ಠರಿಂದ ಶುಭ ಹಾರೈಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವಂತೆ ಪಕ್ಷದ ವರಿಷ್ಠರು ಹಾರೈಸಿದ್ದಾರೆ. ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವಂತೆಯೂ ಸೂಚಿಸಿದ್ದಾರೆ ಎಂದು ನೂತನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಶನಿವಾರ ಸಂಜೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವಂತೆ ಹಾಗೂ ಜನಪರವಾದ ಆಡಳಿತ ನೀಡುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.   `ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಪಕ್ಷದ `ಕೋರ್ ಕಮಿಟಿ~ ಸಭೆ  ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ಎಲ್ಲರನ್ನೂ ಒಂದೇ ಸ್ಥಳದಲ್ಲಿ ಭೇಟಿ ಮಾಡುವ ಅವಕಾಶ ಇದ್ದುದರಿಂದ ದೆಹಲಿಗೆ ಬಂದಿದ್ದೆ. ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಜೊತೆಗೂ ಚರ್ಚೆ ನಡೆಸಿದೆ~ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.