ಗುರುವಾರ , ಜೂನ್ 24, 2021
28 °C

ವರ್ಗಾವಣೆ: ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ವಿಭಾಗದ ಡಿಸಿಪಿ ಡಾ.ಜಿ.ರಮೇಶ್ ಹಾಗೂ ಹಲಸೂರು ಗೇಟ್ ಉಪ ವಿಭಾಗದ ಎಸಿಪಿ ಜಿತೇಂದ್ರನಾಥ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮವನ್ನು ರಾಜ್ಯ ನೇಕಾರ ಸಂಘ ತೀವ್ರವಾಗಿ ಖಂಡಿಸಿದೆ.ದಕ್ಷ ಅಧಿಕಾರಿಯಾದ ಡಿಸಿಪಿ ಜಿ.ರಮೇಶ್ ಕಳೆದ ನಾಲ್ಕು ವರ್ಷಗಳಿಂದ ನಗರದ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ್ದಾರೆ. ಈ ವರ್ಗಾವಣೆ ನೀತಿಯನ್ನು ಕೂಡಲೇ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಸಂಘವು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.