ವರ್ಗಾವಣೆ ಪ್ರಶ್ನಿಸಿ ಸಿಎಟಿಗೆ ಮೊರೆ

7

ವರ್ಗಾವಣೆ ಪ್ರಶ್ನಿಸಿ ಸಿಎಟಿಗೆ ಮೊರೆ

Published:
Updated:

ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದ ಅನುಸಾರ, ಐಎಎಸ್ ಅಧಿಕಾರಿಗಳಾದ ಡಾ. ರಾಮೇಗೌಡ, ವಿ. ಶ್ರೀರಾಮ ರೆಡ್ಡಿ, ಎಸ್.ಎನ್. ನಾಗರಾಜ್, ಬಿ.ಎನ್. ಕೃಷ್ಣಯ್ಯ, ಡಾ.ಜಿ.ಸಿ. ಪ್ರಕಾಶ್ ಸೇರಿಒಟ್ಟು 12 ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರದ ಕ್ರಮವನ್ನು ಕೇಂದ್ರೀಯ ಆಡಳಿತ ನ್ಯಾಯಮಂಡಳಿಯಲ್ಲಿ (ಸಿ.ಎ.ಟಿ) ಪ್ರಶ್ನಿಸಲಾಗಿದೆ.ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಅಧಿಕಾರಿಗಳ ವರ್ಗಾವಣೆ ಮಾಡಬೇಕು ಎಂದು ಆಯೋಗ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರ ಅನುಸಾರ, ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸಿ.ಎ.ಟಿ, ಸರ್ಕಾರ ಮತ್ತು ಆಯೋಗಕ್ಕೆ ನೋಟಿಸ್ ಜಾರಿಗೆ ಆದೇಶಿಸಿದೆ. ವಿಚಾರಣೆಯನ್ನು ಏ.9ಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry