ಕೆಂಗೇರಿ: ಯಲಹಂಕ, ಕೆ.ಆರ್.ಪುರ, ಕೆಂಗೇರಿ ರೈಲ್ವೆ ಮಾರ್ಗಗಳನ್ನು ಜೋಡಿ ಮಾರ್ಗಕ್ಕೆ ಪರಿವರ್ತಿಸಿ ವರ್ತುಲ ರೈಲು ಸಂಪರ್ಕ ವ್ಯವಸ್ಥೆಯಾಗಿ ಅಭಿವೃದ್ಧಿಪಡಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಶೀಘ್ರವೇ ನಗರದ ಶಾಸಕರ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಸಂಸದ ಅನಂತಕುಮಾರ್ ತಿಳಿಸಿದರು.

ನಾಗರಬಾವಿ ವೃತ್ತದಲ್ಲಿ ಬಿಬಿಎಂಪಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ರೂ 500 ಕೋಟಿ ವೆಚ್ಚದ ವರ್ತುಲ ರೈಲು ಯೋಜನೆ ಮಂಜೂರು ಮಾಡುವಂತೆ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಒತ್ತಾಯಿಸಲಾಗುವುದು’ ಎಂದು ಅವರು ಹೇಳಿದರು.

‘ಸ್ಥಳೀಯ ವರ್ತುಲ ರೈಲು ಆರಂಭಗೊಂಡರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗುತ್ತದೆ’ ಎಂದು ಆಶಿಸಿದ ಅವರು, ‘ಬಿಡದಿ ಬಳಿ 1250 ಮೆಗಾ ವಾಟ್ ಸ್ಥಾವರದ ಅನಿಲ ಆಧಾರಿತ ವಿದ್ಯುತ್ ಘಟಕ ಆರಂಭಿಸಲಾಗುತ್ತಿದೆ. ಅದನ್ನು 5 ಸಾವಿರ ಮೆಗಾವಾಟ್ಗೆ ಹೆಚ್ಚಿಸಿದರೆ ನಗರಕ್ಕೆ ಸಾಕಾಗುವಷ್ಟು ವಿದ್ಯುತ್ ಪೂರೈಕೆಯಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.