ಕೋಲಾರ: ವಕ್ಕಲೇರಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ರಾತ್ರಿ ವೇಳೆ ತರಗತಿ ನಡೆಸಿದರೆ ವಿದ್ಯಾರ್ಥಿಗಳಿಗೆ ಹಾಲು, ಕೋಳಿ ಮೊಟ್ಟೆ, ಶಿಕ್ಷಕರಿಗೆ ತಿಂಗಳಿಗೆ ಎರಡೂವರೆ ಸಾವಿರ ರೂಪಾಯಿಯಂತೆ ಇಡೀ ವರ್ಷದ ಖರ್ಚನ್ನು ಎಸ್ಡಿಎಂಸಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವ ಆರ್.ವರ್ತೂರು ಪ್ರಕಾಶ್ ತಿಳಿಸಿದರು.
ತಾಲ್ಲೂಕಿನ ವಕ್ಕಲೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ `ಶಾಲೆಗಾಗಿ ನಾವು-ನೀವು~ ಕಾರ್ಯಕ್ರಮದಲ್ಲಿ ಅವರು ಭರವಸೆ ನೀಡಿದರು.

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಮಂದಿಯೇ ಹೆಚ್ಚು. ಆದರೆ ವಕ್ಕಲೇರಿ ಶಾಲೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ವಾತಾವರಣವನ್ನು ದಾನಿಗಳ ಸಹಾಯದಿಂದ ನಿರ್ಮಿಸಿದೆ ಎಂದು ಶ್ಲಾಘಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಚೌಡೇಶ್ವರಿ, ದುಬಾರಿ ಶುಲ್ಕ ಕಟ್ಟಲಾಗದಿದ್ದರೂ ಜನತೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎಂದು ಖಾಸಗಿ ಶಾಲೆಗಳತ್ತ ಹೋಗುತ್ತಿದ್ದಾರೆ. ಆದರೆ ವಕ್ಕಲೇರಿಯಲ್ಲಿ ಅದಕ್ಕೆ ವ್ಯತಿರಿಕ್ತವಾಗಿ ಪೋಷಕರು ಸರ್ಕಾರಿ ಶಾಲೆಯತ್ತ ನೋಡುತ್ತಿದ್ದಾರೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ವಿ.ಪದ್ಮನಾಭ್, ಮುಖಂಡ ವಕ್ಕಲೇರಿ ರಾಮು, ಎಸ್ಡಿಎಂಸಿ ಅಧ್ಯಕ್ಷೆ ಆರ್.ಜ್ಯೋತಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಮಕ್ಕಳಿಗೆ ನೋಟ್ಪುಸ್ತಕ, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ದಾನಿಗಳನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಎಸ್ಡಿಎಂಸಿ ಸದಸ್ಯರಾದ ವಿ.ಬಿ.ರಾಜಣ್ಣ, ಕೃಷ್ಣಪ್ಪ, ಮುಖಂಡರಾದ ಬ್ಯಾಂಕ್ ಮುನಿಯಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್, ತಮ್ಮಣ್ಣ, ಕೆಂಬೋಡಿ ಮುನಿಯಪ್ಪ, ಮುಖಂಡರಾದ ಯಶೋದಮ್ಮ, ನಾರಾಯಣಸ್ವಾಮಿ, ತಮ್ಮಣ್ಣ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ನಿವೃತ್ತ ಮುಖ್ಯಶಿಕ್ಷಕ ಕೆ.ಎನ್.ಕೃಷ್ಣಪ್ಪ, ಪ್ರಭಾರಿ ಮುಖ್ಯಶಿಕ್ಷಕಿ ಕಲಾವತಿ, ಸಿ.ಬಿ.ನಾಗರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.