ವಲ್ಯಾಪುರೆ ಪದತ್ಯಾಗ

7

ವಲ್ಯಾಪುರೆ ಪದತ್ಯಾಗ

Published:
Updated:

ಗುಲ್ಬರ್ಗ/ ಹುಬ್ಬಳ್ಳಿ: ಫ್ಯಾಕ್ಸ್ ಮೂಲಕ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿರುವುದಾಗಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಸುನೀಲ್ ವಲ್ಯಾಪುರೆ ಹುಬ್ಬಳ್ಳಿಯಲ್ಲಿ ಶನಿವಾರ ಬಹಿರಂಗಪಡಿಸಿದರು.`ಶನಿವಾರ ರಾತ್ರಿ ರಾಜೀನಾಮೆ ಪತ್ರವನ್ನು ಕಳುಹಿಸಿದ್ದೇನೆ. ಆದರೆ ಶೆಟ್ಟರ್ ಅದನ್ನು ಸ್ವೀಕರಿಸಿಲ್ಲ. ಹೀಗಾಗಿ ಭಾನುವಾರ ಬೆಳಿಗ್ಗೆ ಮತ್ತೊಮ್ಮೆ ರಾಜೀನಾಮೆ ಪತ್ರವನ್ನು ಕಳುಹಿಸಿ ಕೊಡುತ್ತೇನೆ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ `ಭಾನುವಾರ ಹಾವೇರಿಯಲ್ಲಿ ನಡೆಯುವ ಕೆಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದೇನೆ' ಎಂದು ಅವರು ಹೇಳಿದರು. ಅವರು ಕೆಲವು ದಿನಗಳಿಂದ ತಮ್ಮ ಸ್ವಕ್ಷೇತ್ರವಾದ ಗುಲ್ಬರ್ಗ ಜಿಲ್ಲೆಯ ಚಿಂಚೋಳಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಕೆಜೆಪಿ ಸೇರ್ಪಡೆ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry